ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು.


COMMERCIAL BREAK
SCROLL TO CONTINUE READING

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ವಾಮಮಾರ್ಗದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು  ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಶಾಸಕರ ಪ್ರಕಾರ ವಾಮಮಾರ್ಗದ ಅ ರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೇ, ಕೈಸನ್ನೇ ಮೂಲಕ ನಮ್ಮ ಸದಸ್ಯರಿಗೆ  ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.


ಇದನ್ನೂ ಓದಿ:ಮಧ್ಯರಾತ್ರಿ ಸಂಭೋಗಕ್ಕೆ ಬಾ ಎಂದಿದ್ದ ಆ ನಟ, ಇನ್ನೊಬ್ಬ ಹೀರೋ ಬ್ಯಾಕ್‌ ಮುಟ್ಟಿ, ತಬ್ಬಿ ಮುತ್ತಿಟ್ಟ!


ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು. ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿ ಆಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರ ಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಅವರು ಪ್ರಹಾರ ನಡೆಸಿದರು.


ಚುನಾವಣೆ ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್. ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ, ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದರು. ನಮ್ಮ‌ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಎನ್ನುವುದು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು. ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ. ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್ ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದರು ಸಚಿವರು. ನಂತರ ಸಚಿವರು ನಗರಸಭೆ ಸದಸ್ಯರಾದ ಮಹದೇವು, ರಾಮಲಿಂಗಯ್ಯ, ವಿಶಾಲಾಕ್ಷಿ ಅವರ ಮನೆಗಳಿಗೆ ಭೇಟಿ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.