ಶಾಸಕ ಹ್ಯಾರಿಸ್ ಪುತ್ರ ಪೊಲೀಸರಿಗೆ ಶರಣು

ಕಾಂಗ್ರೇಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿರುವ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದಾರೆ.  

Last Updated : Feb 19, 2018, 12:40 PM IST
ಶಾಸಕ ಹ್ಯಾರಿಸ್ ಪುತ್ರ ಪೊಲೀಸರಿಗೆ ಶರಣು title=
Pic: ANI

ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿ ತಲೆಮರಿಸಿಕೊಂಡಿದ್ದ ಕಾಂಗ್ರೇಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿರುವ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದಾರೆ.

ಫೆ.17 ರಂದು ಯುಬಿ ಸಿಟಿಯಲ್ಲಿರುವ ಫೆಗ್ರಿ ಕಫೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕಾರಣಕ್ಕೆ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಮತ್ತು ಆತನ ಸ್ನೇಹಿತರು ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದರು. ನಂತರ ಮೊಹಮ್ಮದ್ ಹ್ಯಾರಿಸ್ ನಳಪಾಡ್ ತಲೆ ಮರೆಸಿಕೊಂಡಿದ್ದರು.

ಘಟನೆಯ ನಂತರ ಮಲ್ಯ ಆಸ್ಪತ್ರೆಗೆ ದಾಖಲಾದ ವಿದ್ವತ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Trending News