ಬೆಂಗಳೂರು : ಉಪ ಚುನಾವಣೆಯಲ್ಲಿ ಉತ್ತಮ ಗೆಲುವು ಸಾಧಿಸಿರುವ ಶಾಸಕ ಮುನಿರತ್ನ ಅವರಿಗೆ ಸಂಪುಟ ಸೇರುವ ಅವಕಾಶ ಸಿಗುತ್ತದೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಗರದ ಲಗ್ಗೆರೆಯಲ್ಲಿ ಕೊರೋನಾ ಸಂಕಷ್ಟದಲ್ಲಿರುವ ಜನರಿಗೆ ಶಾಸಕ ಮುನಿರತ್ನ(Munirathna) ಆಯೋಜಿಸಿದ್ದ ಒಂದು ಲಕ್ಷ ಆಹಾರ ಕಿಟ್‌ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ಭರವಸೆ ನೀಡಿದ್ದಾರೆ. ಅವರು ತಪ್ಪದೆ ಮಾತು ಉಳಿಸಿಕೊಳ್ಳುತ್ತಾರೆ, ಈ ಬಗ್ಗೆ ಸಂಶಯ ಬೇಡ ಎಂದು ಹೇಳಿದ್ದಾರೆ.


ಇದನ್ನೂ ಓದಿ : `ಹೈಕಮಾಂಡ್ ಸೂಚಿಸಿದ ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ..!'


ಮುನಿರತ್ನ ಕೆಲಸ ಶ್ಲಾಘನೀಯ. ಒಂದು ಲಕ್ಷ ರೇಷನ್‌ ಕಿಟ್‌(Ration Kit) ವಿತರಣೆ ಅಂದರೆ ಸಣ್ಣ ಸಂಗತಿ ಅಲ್ಲ. ಯಾರೇ ಬಂದರೂ ರೇಷನ್‌ ಕೊಡಲಾಗುತ್ತಿದೆ. ಇದು ಖಂಡಿತಾ ಒಳ್ಳೆಯ ಕೆಲಸ. ನಗರದಲ್ಲಿ ಯಾರೂ ಹಸಿವಿಂದ ಇರಬಾರದು. ಎಲ್ಲರಿಗೂ ಆಹಾರ ಸಿಗಬೇಕು. ಈ ನಿಟ್ಟಿನಲ್ಲಿ ಮುನಿರತ್ನ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಪಾಲಿಸುತ್ತಾ ಬಂದು ಕಿಟ್‌ಗಳನ್ನು ಸ್ವೀಕರಿಸುತ್ತಿದ್ದಾರೆಂದು ಹೇಳಿದರು.


ಇದನ್ನೂ ಓದಿ : Karnataka Monsoon Entry : ರಾಜ್ಯಕ್ಕೆ ಮುಂಗಾರು ಎಂಟ್ರಿ : ಎರಡು ದಿನ ಭಾರೀ ಮಳೆ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ