MLA on Rashmika Mandanna : ಈಗ ಎಲ್ಲಿ ನೋಡಿದರೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹೆಸರು ಕೇಳಿಬರುತ್ತಿದೆ. ತೆಲುಗು, ತಮಿಳು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸುವ ಮೂಲಕ ಪ್ಯಾನ್-ಇಂಡಿಯಾ ತಾರೆಯಾಗಿ ಮಿಂಚುತ್ತಿದ್ದಾರೆ.. ಪುಷ್ಪ ಮತ್ತು ಚಾವಾ ಚಿತ್ರಗಳು ಸೂಪರ್ ಹಿಟ್ ಆಗುತ್ತಿದ್ದಂತೆ ನಟಿ ಕ್ರೇಜ್ ಗಗನಕ್ಕೇರಿದೆ..
ಪ್ರಸ್ತುತ ರಶ್ಮಿಕಾ.. ಬಿಟೌನ್ ಕಿಂಗ್ ಸಲ್ಮಾನ್ ಖಾನ್ ಜೊತೆ ಸಿಕಂದರ್ ಎಂಬ ಹಿಂದಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದರ ನಡುವೆ ರಾಜ್ಯದ ಕಾಂಗ್ರೆಸ್ ಶಾಸಕ ರವಿ ಗಾಣಿ ರಶ್ಮಿಕಾ ಮಂದಣ್ಣ ಬಗ್ಗೆ ಗಂಭೀರವಾಗಿ ಮಾತನಾಡಿದ್ದರು. ಅಲ್ಲದೆ ನಟಿಗೆ ತಕ್ಕ ಪಾಠ ಕಲಿಸಬೇಕು ಎಂದು ಕಾಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ:IPS ಅಧಿಕಾರಿಯಾಗುವ ನನ್ನ ಈಡೇರಲಿಲ್ಲ.. ಅದಕ್ಕೆ ಕಾರಣ ಸಲ್ಮಾನ್ ಖಾನ್..! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ ರವೀನಾ
ಹೌದು.. ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಾಣಿಗ ಅವರು ರಶ್ಮಿಕಾ ಮಂದಣ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ರಶ್ಮಿಕಾ ಒಪ್ಪಿಕೊಂಡಿಲ್ಲ ಎಂದು ಹೇಳಿದರು. ವೃತ್ತಿಜೀವನ ನೀಡಿದ ಉದ್ಯಮವನ್ನು ನಟಿ ಗೌರವಿಸುತ್ತಿಲ್ಲ ಎಂದು ಕೋಪವನ್ನು ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ರಶ್ಮಿಕಾಗೆ ಸೂಕ್ತ ಪಾಠ ಕಲಿಸಬೇಕು ಎಂದು ಶಾಸಕ ರವಿ ಹೇಳಿದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಹಾಜರಾಗುವಂತೆ ರಶ್ಮಿಕಾ ಅವರನ್ನು ಹಲವು ಬಾರಿ ಸಂಪರ್ಕಿಸಿ ವಿನಂತಿಸಿದ್ದೇವೆ. ಆದರೆ ಅವರು ಅದಕ್ಕೆ ಒಪ್ಪಲಿಲ್ಲ.. ಅಲ್ಲದೆ, "ನನಗೆ ಕರ್ನಾಟಕಕ್ಕೆ ಬರಲು ಸಮಯವಿಲ್ಲ. ನನ್ನ ಮನೆ ಹೈದರಾಬಾದ್‌ನಲ್ಲಿದೆ." ಎಂದರು.. ಅಷ್ಟೇ ಅಲ್ಲ, ಕರ್ನಾಟಕ ಗೊತ್ತಿಲ್ಲದವಳಂತೆ ಮಾತನಾಡಿದಳು.. ನಮ್ಮವರು ಹತ್ತು ಬಾರಿ ವಿನಂತಿಸಿಕೊಂಡರು ರಾಜ್ಯಕ್ಕೆ ಬರಲು ನಕಾರ ಮಾಡಿದಳು ಅಂತ ಶಾಸಕ ರವಿ ಗಾಣಿಗ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









