ಲೊಕೇಶನ್ ಟ್ರ್ಯಾಕ್ ಆಗುತ್ತಿರುವ ಬಗ್ಗೆ ಶಾಸಕ ಶಿವರಾಜ ಪಾಟೀಲ್ ಆರೋಪ : ಅಧಿಕಾರಿಗಳಿಂದ ಮಾಹಿತಿ‌ ಪಡೆದು ಮುಂದಿನ ಕ್ರಮ : ಪರಮೇಶ್ವರ್

ತಮ್ಮ ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ ಎಂದು ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರು ಆರೋಪದ ಕುರಿತು ಮಾಧ್ಯಮದವರಿಗೆ ಸಚಿವ ಜಿ ಪರಮೇಶ್ವರ್  ಪ್ರತಿಕ್ರಿಯಿಸಿದರು.

Written by - Ranjitha R K | Last Updated : Apr 4, 2025, 04:51 PM IST
  • ತಮ್ಮ ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ ಎಂದು ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಆರೋಪ
  • ಈ ಬಗ್ಗೆ ಎಸ್‌ಪಿ ಹಾಗೂ ಐಜಿಪಿಯವರೊಂದಿಗೆ ಮಾತನಾಡುತ್ತೇನೆ -ಪರಮೇಶ್ವರ್
  • ವಕ್ಫ್ ಮಸೂದೆ ರಾಜಕೀಯ ಕಾರಣಕ್ಕಾಗಿ ಮಾಡಿಕೊಳ್ಳಲಾಗಿದೆ - ಪರಮೇಶ್ವರ್
ಲೊಕೇಶನ್ ಟ್ರ್ಯಾಕ್ ಆಗುತ್ತಿರುವ ಬಗ್ಗೆ ಶಾಸಕ ಶಿವರಾಜ ಪಾಟೀಲ್ ಆರೋಪ : ಅಧಿಕಾರಿಗಳಿಂದ ಮಾಹಿತಿ‌ ಪಡೆದು ಮುಂದಿನ ಕ್ರಮ : ಪರಮೇಶ್ವರ್

ಬೆಂಗಳೂರು : ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ವಲಯ ಐಜಿಪಿ ಹಾಗೂ ಡಿಜಿಪಿ ಅವರಿಂದ ಮಾಹಿತಿ ಪಡೆಯುವುದಾಗಿ ಗೃಹ ಸಚಿವ ಪರಮೇಶ್ವರ್  ಹೇಳಿದರು.

Add Zee News as a Preferred Source

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ ಎಂದು ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರು ಆರೋಪದ ಕುರಿತು ಮಾಧ್ಯಮದವರಿಗೆ ಸಚಿವರು ಪ್ರತಿಕ್ರಿಯಿಸಿದರು.

ಎಸ್‌ಪಿ ಹಾಗೂ ಐಜಿಪಿಯವರೊಂದಿಗೆ ಮಾತನಾಡುತ್ತೇನೆ. ಅಂತಹ ಘಟನೆ ಏನಾದರು ನಡೆದಿದ್ದರೆ, ಯಾಕೆ ನಡೆದಿದೆ, ಯಾವ ಕಾರಣಕ್ಕೆ ಆಗಿದೆ, ಯಾರು ಅನುಮತಿ ಕೊಟ್ಟಿದ್ದಾರೆ ಎಂದು ವಿಚಾರಿಸಿ ಮುಂದಿನ ಕ್ರಮ ತೆಗದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ : ಟ್ರಾಪಿಕ್ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ

ವಕ್ಫ್ ಮಸೂದೆ ರಾಜಕೀಯ ಕಾರಣಕ್ಕಾಗಿ ಮಾಡಿಕೊಳ್ಳಲಾಗಿದೆ ವಿನಃ ಜನರ ಹಿತಾಸಕ್ತಿಗಾಗಿ ತಂದಿಲ್ಲ ಎಂದು ಪುನರುಚ್ಛಿಸಿದರು.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮಾಡಿರುವ ನಿರಾಧಾರ ಆರೋಪಕ್ಕೆ ಸದನದಲ್ಲಿ ಅವರೇ ಸೂಕ್ತ ಉತ್ತರ ನೀಡಿದ್ದಾರೆ. ಯಾವುದಾದರು ಆಸ್ತಿ ಕಬಳಿಕೆ ಮಾಡಿದ್ದರೆ ರಾಜಕೀಯ ನೀವೃತ್ತಿ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ‌ ಎಂದರು.

ವಿಧಾನಪರಿಷತ್‌ಗೆ ನಾಮನಿರ್ದೇಶನ ಸದಸ್ಯರ ಆಯ್ಕೆ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಬಿಟ್ಟಿರುವ ವಿಚಾರ. ನಿನ್ನೆ ಭೇಟಿ ವೇಳೆ ಎಐಸಿಸಿ ವರಿಷ್ಠರೊಂದಿಗೆ ಮಾತನಾಡಿದ್ದಾರೆ ಯೇ ಇಲ್ಲವೇ ಎಂಬುದು ನನಗೆ ಗೊತ್ತಿಲ್ಲ. ನಿಗಮ ಮಂಡಳಿ ವಿಚಾರದಲ್ಲಿ ನನ್ನ ಶಿಫಾರಸ್ಸು ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಎಂಬುದು ಸುಳ್ಳು. ಆಯ್ಕೆ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದರು. ನಾನು ಸಮಾಧಾನವಾಗಿಯೇ ಇದ್ದೇನೆ ಎಂದು ಹೇಳಿದರು.

ಇದನ್ನೂ ಓದಿ : ಯುಪಿಎಸ್ಸಿ ಪಾಸ್ ಮಾಡಲು ಸಾಕಷ್ಟು ಎಫರ್ಟ್ ಹಾಕಬೇಕು

ಪರಿಷತ್ ಸದಸ್ಯರ ಆಯ್ಕೆ ವಿಚಾರದಲ್ಲಿ ನನ್ನನ್ನು ಪರಿಗಣಿಸುವ ಅಗತ್ಯವಿಲ್ಲ‌. ಅನೇಕ ಸಂದರ್ಭದಲ್ಲಿ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ. ನಾನು ಅಧ್ಯಕ್ಷನಾಗಿದ್ದಾಗ ಕೇಳುತ್ತಿರಲಿಲ್ಲ. ಕಠಿಣವಾದ ತೀರ್ಮಾನ ತೆಗೆದುಕೊಳ್ಳುವಾಗ ಕೇಳುತ್ತಿದ್ದೆವು. ಸುಲಭವಾದ ತೀರ್ಮಾನ ತೆಗೆದುಕೊಳ್ಳುವಾಗ ಕೇಳುತ್ತಿರಲಿಲ್ಲ. ನಾಲ್ಕು ಜನರ ನಾಮನಿರ್ದೇಶನ ಮಾಡಬೇಕಿದೆ. ಇದು ಚುನಾವಣೆ ಅಥವಾ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಬೇಕಿಲ್ಲ. ಸುಲಭವಾಗಿರುವುದರಿಂದ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರ ವಿವೇಚನೆಗೆ ಬಿಟ್ಟದ್ದು. ವರಿಷ್ಠರ ಜೊತೆ ಚರ್ಚಿಸಿ ಅನುಮತಿ ತೆಗೆದುಕೊಂಡು ಬರುತ್ತಾರೆ ಎಂದರು.

ಕೆಲವು ದಿನಗಳ ಹಿಂದೆ ನೋವಿನಲ್ಲಿದ್ದ ತಾವು, ಈಗ ಸಮಾಧಾನವಾಗಿದ್ದೀರಿ ಎಂದು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವತ್ತು ನೋವಲ್ಲಿಲ್ಲ. ನಮ್ಮದೇನು ಯಾವಾಗಲು ಒಂದೇ ರೀತಿ. ಗ್ರಾಫ್‌ನಲ್ಲಿ ಏರಿಳಿತ ಇಲ್ಲ‌‌. ಒಂದೇ ರೀತಿ ಇದೆ ಎಂದು ಅವರು ಉತ್ತರಿಸಿದರು‌.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News