ಮೈಸೂರು: ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತದೆ ಎಂಬ ಸಿಟಿ ರವಿ ಹೇಳಿಕೆಗೆ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ‘ಬಿಜೆಪಿಯವರು ಪೊಳ್ಳು ಹಿಂದೂಗಳು, ನಾವೇ ನಿಜವಾದ ಹಿಂದೂಗಳು’ ಅಂತಾ ಹೇಳಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವಾಗಲೇ ಅನೇಕ ಹಿಂದೂಗಳ ಹತ್ಯೆಯಾಗಿದೆ. ಕಾಂಗ್ರೆಸ್‍ನ 70ವರ್ಷದ ಅವಧಿಯಲ್ಲಿ ಹಿಂದೂಗಳ ಹತ್ಯೆಯಾಗಿಲ್ಲ ಅಂತಾ ಹೇಳಿದ್ದಾರೆ.


ಇದನ್ನೂ ಓದಿ: ಖರ್ಗೆ ಹೆಸರಿಗಷ್ಟೇ ಅಧ್ಯಕ್ಷ, ಪೆನ್ನಿನ ಟಾಪ್ ಓಪನ್ ಮಾಡಲೂ ಸೋನಿಯಾ ಅನುಮತಿಗೆ ಕಾಯಬೇಕು: ಬಿಜೆಪಿ


ನಮ್ಮ ತಂದೆ ಸಿದ್ದರಾಮಯ್ಯನವರ 40 ವರ್ಷಗಳ ರಾಜಕೀಯದಲ್ಲಿ ಹಿಂದೂಗಳ ಹತ್ಯೆಗಳಾಗಿಲ್ಲ. ಬಿಜೆಪಿ ಅಧಿಕಾರವಿರುವಾಗಲೇ ಹಿಂದೂಗಳ ಹತ್ಯೆಯಾಗುತ್ತಿದೆ. ಜಾತಿ-ಧರ್ಮಗಳ ಮಧ್ಯೆ ಕೋಮುಗಲಭೆ ಹಬ್ಬಿಸಿ ಅಧಿಕಾರಕ್ಕೆ ಬರುವುದೇ ಬಿಜೆಪಿ ಮುಖ್ಯ ಉದ್ದೇಶ. ಎಲ್ಲಾ ಧರ್ಮಗಳನ್ನು ಒಗ್ಗೂಡಿಸಿ ಶಾಂತಿ-ನಿಮ್ಮದಿ ಕಾಪಾಡುವುದು ಕಾಂಗ್ರೆಸ್ ಪಕ್ಷದ ಉದ್ದೇಶ’ ಅಂತಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.


ಹಿಂದೂಗಳೆಲ್ಲ ಬಿಜೆಪಿ ಪರವಿಲ್ಲ, ಬಿಜೆಪಿಯಿಂದ ಹಿಂದೂಗಳ ರಕ್ಷಣೆ ಅಸಾಧ್ಯ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲವೂ ಸರಿಯಾಗಲಿದೆ ಅಂತಾ ಮೈಸೂರಿನ ವರುಣ ಕ್ಷೇತ್ರದ ಕೊಂತಯ್ಯನಹುಂಡಿಯಲ್ಲಿ ಶಾಸಕ ಡಾ.ಯತೀಂದ್ರ ಹೇಳಿದ್ದಾರೆ.


ಇದನ್ನೂ ಓದಿ: ಸೈಲೆಂಟ್ ಸುನೀಲ್ ಸೇರಿ ಯಾವುದೇ ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ: ಸಿಎಂ ಬೊಮ್ಮಾಯಿ


ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿ ಸಿಟಿ ರವಿ, ‘ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದ್ರೆ ಹಿಂದೂಗಳ ಹತ್ಯೆಯಾಗುತ್ತದೆ. ಸಿದ್ದರಾಮಯ್ಯ ಸರ್ಕಾರದಲ್ಲೇ ಅತಿ ಹೆಚ್ಚು ಹಿಂದೂಗಳ ಕೊಲೆಯಾಗಿದೆ. ಅವರು ಸಿದ್ರಾಮುಲ್ಲಾ ಖಾನ್’ ಎಂದು ಟೀಕಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.