ಬೆಂಗಳೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿ ಸ್ಥಾಪಿಸಲಾಗಿರುವ ನೃಪತುಂಗ ಏಕೀಕೃತ ವಿಶ್ವವಿದ್ಯಾಲಯದ ಉದ್ಘಾಟನೆಗೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದು ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ರಾಜ್ಯ ರಾಜಕಾರಣದಲ್ಲಿ ಸೀಕ್ರೆಟ್‌ ಆಪರೇಷನ್‌ ನಡೆಸಿದ್ರಾ ಬಿಜೆಪಿ ಚಾಣಾಕ್ಯ?


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.


ಕರ್ನಾಟಕ ವಿಧಾನ ಪರಿಷತ್ತಿನ ಹಿರಿಯ ಜನತಾದಳ (ಜಾತ್ಯತೀತ) ನಾಯಕ ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾದರು. ಮುಂಬರುವ ಚುನಾವಣೆಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಎಲ್‌ಸಿ ಟಿಕೆಟ್‌ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಇದೀಗ ಪರಿಷತ್ ಟಿಕೆಟ್ ಆಕಾಂಕ್ಷಿ ಮೋಹನ್ ಲಿಂಬಿಕಾಯಿ ಅವರ ವಿರೋಧದ ನಡುವೆಯೂ ಹೊರಟ್ಟಿಗೆ ಬಿಜೆಪಿ ಟಿಕೆಟ್ ನೀಡುವುದನ್ನು ಖಚಿತಗೊಳಿಸಲಾಗಿದೆ. 


ಇದನ್ನು ಓದಿ: IAS Success Story: ಕೊನೆ ಯತ್ನದವರೆಗೂ ಛಲಬಿಡದೆ ಐಎಎಸ್ ಅಧಿಕಾರಿಯಾದ ನಮಿತಾ ಶರ್ಮಾ


ಈ ವರ್ಷ ಜೂನ್ ಅಥವಾ ಜುಲೈನಲ್ಲಿ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ. 1980 ರಿಂದ ಸತತ ಏಳು ಬಾರಿ ಎಂಎಲ್‌ಸಿಯಾಗಿ ಆಯ್ಕೆಯಾದ 72 ವರ್ಷದ ಹೊರಟ್ಟಿ, ಜೆಡಿಎಸ್‌ನ ಪ್ರಮುಖ ಲಿಂಗಾಯತ ಅಭ್ಯರ್ಥಿಯಾಗಿದ್ದರು. ಈ ಹಿಂದೆ ರಾಜ್ಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.