ಮೈಸೂರು: ಕುರುಬ ಸಮಾಜವನ್ನು ಎಸ್ ಟಿ ಗೆ ಸೇರಿಸುವ ವಿಚಾರದಲ್ಲಿ ಆರ್ ಎಸ್‌ಎಸ್ ಹಣ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಈ ಮಾತನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಮಾಜದಿಂದ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯನವರೇ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ(Siddaramaiah) ಕೂಡಲೇ ಸ್ವಾಮೀಜಿ ಹಾಗೂ ಸಮುದಾಯದ ಕ್ಷಮೆಯನ್ನು ಕೇಳಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಇಲ್ಲದಿದ್ದರೆ ಸಮಾಜದಿಂದ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ. ನೀವು ಒಬ್ಬರೇ ಬುದ್ಧಿವಂತರಲ್ಲ. ನೀವು ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಮಾಜ, ಸ್ವಾಮೀಜಿಯವರ ಪಾತ್ರವೂ ಇದೆ. ಅದನ್ನು ನೀವು ಮರೆಯಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.


Suresh Angadi: ಶಾ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಬೈಎಲೆಕ್ಷನ್‌ ಟಿಕೆಟ್ ಇವರಿಗೆ ಫಿಕ್ಸ್..!?


ಶಾಸಕ ಜಿ.ಟಿ. ದೇವೇಗೌಡ ಅವರು ಬಿಜೆಪಿ ಬಂದರೆ ಒಳ್ಳೆಯದು. ಈ ಬಗ್ಗೆ ಅವರೊಂದಿಗೆ ಮಾತನಾಡುತ್ತೇನೆ. ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಪಾತ್ರ ಇಲ್ಲ. ಯಡಿಯೂರಪ್ಪ ಸುಮ್ಮನೆ ಹೈಕಮಾಂಡ್ ಕಡೆ ಬೆರಳು ತೋರಿಸುತ್ತಾರೆ ಎಂದರು.


Congress Protest : ನಿಮ್ಮ ನಾಟಕ ಚೆನ್ನಾಗಿದೆ..! ಕಾಂಗ್ರೆಸ್ ರಾಜಭವನ ಯಾತ್ರೆಗೆ ಬಿಜೆಪಿ ವ್ಯಂಗ್ಯ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.