ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮತ್ತು ವಿದೇಶಗಳಿಗೆ ಪ್ರಯಾಣಕ್ಕೆ ಬಳಸುವ ಹಣ ಸ್ವಂತದ್ದೋ? ಸರ್ಕಾರದ್ದೋ? ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ  ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಮುಖ್ಯ ಮಂತ್ರಿಗಳು ಸರ್ಕಾರಿ ವೆಚ್ಚದಲ್ಲಿ ಸಾಧನೆ- ಸಂಭ್ರಮ ಕಾರ್ಯಕ್ರಮ ನಡೆಸುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ಟೀಕೆಗೆ ಸಿಎಂ ಸಿದ್ದರಾಮಯ್ಯ ಈ  ರೀತಿ ತಿರುಗೇಟು ನೀಡುವ ಮೂಲಕ ಪ್ರತಿಪಕ್ಷಗಳ ಬಾಯಿ ಮುಚ್ಸಿಸಿದ್ದಾರೆ. ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಾ ಮಾತನಾಡಿದ ಅವರು "ಮುಖ್ಯಮಂತ್ರಿಯಾಗಿ ಸರ್ಕಾರಿ ಕಾರ್ಯಕ್ರಮವನ್ನು ಸರ್ಕಾರದ ಖರ್ಚಿನಲ್ಲಿ ಮಾಡಿದರೆ ತಪ್ಪೇನು ?" ಎಂದು ಪ್ರತಿಪಕ್ಷಗಳನ್ನು ಪ್ರಶ್ನಿಸಿದ್ದರು. 


ಇನ್ನು ಮುಂದುವರೆದು  ತಮ್ಮ ರಾಜ್ಯ ಪ್ರವಾಸಕ್ಕೆ ಜನರಿಂದ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು  ಸಹಿಸದೆ ಬಿಜೆಪಿ,ಜೆಡಿಎಸ್ನವರು ಇಂತಹ ಇಲ್ಲ ಸಲ್ಲದ  ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳನ್ನು ಕುಟುಕಿದರು.