ಬೆಂಗಳೂರು : ಬಿಬಿಎಂಪಿ‌ ಚುನಾವಣೆ ಹತ್ತಿರ ಬರ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ಮೂಲ ಸೌಕರ್ಯದ ವಿಚಾರದ ಬಗ್ಗೆ ಜನ ಸಿಟ್ಟಾಗಿದ್ದು, ಚುನಾವಣೆ ‌ನಡೆದ್ರೆ ಬಿಜೆಪಿಗೆ ನಷ್ಟ ಎಂಬ ಸನ್ನಿವೇಶವಿದೆ. ಹೀಗಾಗಿ ಅಖಾಡಕ್ಕೆ ಪ್ರಧಾನಿಯೇ ಇಳಿದಿದ್ದು, ರಾಜ್ಯದಲ್ಲಿ ಸಂಚಲನ ಸೃಷ್ಟಿಸಲು ಬಿಜೆಪಿ ‌‌ಸಜ್ಜಾಗುತ್ತಿದೆ.


COMMERCIAL BREAK
SCROLL TO CONTINUE READING

ರಸ್ತೆ ಗುಂಡಿ, ಭ್ರಷ್ಟಾಚಾರ, ರಾಜಕಾಲುವೆ ಸಮಸ್ಯೆ ಮುಂತಾದ ವಿಚಾರದಿಂದ ಬೆಂಗಳೂರಿನಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಈಗ ಚುನಾವಣೆ ನಡೆದ್ರೆ ಬಿಜೆಪಿ ಸೋತು‌ ಬಿಡುತ್ತೆ ಎಂಬ ಚರ್ಚೆಯೂ ಶುರುವಾಗಿದೆ. ಹೀಗಾಗಿ ಬಿಬಿಎಂಪಿ ಚುನಾವಣೆಗೆ ಬಿಜೆಪಿ ಬ್ರಹ್ಮಾಸ್ತ್ರ ಬಿಡಲು ಸಿದ್ಧವಾಗಿದೆ. ಅದೇ ಈಗ ಪ್ರಧಾನಿ ಮೋದಿ ನಗರಕ್ಕೆ ಭೇಟಿ ಕೊಡ್ತಿರೋದು.


ಇದನ್ನೂ ಓದಿ : 2nd PUC Result: ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಭ್ರಮೆ - ಎಚ್‌ಡಿಕೆ


ಪ್ರಧಾನಿ ಮೋದಿಗೆ ರಾಜ್ಯದಲ್ಲಿ ಅವರದ್ದೇ ಆದ ಇಮೇಜ್ ಇದೆ. ಹೀಗಾಗಿ ಪ್ರಧಾನಿ ಮೋದಿ ಅವರನ್ನು ಇದೇ ಜೂನ್ 20ರಂದು ಬೆಂಗಳೂರಿಗೆ ಕರೆತರಲು ಬಿಜೆಪಿ ಸಮಯ ನಿಗದಿ ಮಾಡಿದ್ದು, ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಪ್ರದಾನಿ ಭೇಟಿ ಸಂದರ್ಭದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ.


ಜೂನ್ 20-21ರಂದು ಮೋದಿ ರಾಜ್ಯ ಪ್ರವಾಸ..!


ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮ ಆಯೋಜನೆ


ಜೂನ್ 20, 21ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಜೂನ್ 20ರಂದು ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್‌ನಲ್ಲಿ ಕೊಮ್ಮಘಟ್ಟ ಹೆಲಿಪ್ಯಾಡ್‌ಗೆ ತೆರಳಲಿದ್ದಾರೆ. ಅಲ್ಲಿ ಮಧ್ಯಾಹ್ನ 12.30ರಿಂದ 1.45ರವರೆಗೆ ಬೆಂಗಳೂರು ಸಬ್ಅರ್ಬನ್ ರೈಲು ಯೋಜನೆಗೆ ಮತ್ತು ಲಾಜಿಸ್ಟಿಕ್ ಪಾರ್ಕ್‌ಗೆ ಶಂಕುಸ್ಥಾಪನೆ, ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 2.30ರಿಂದ 3.30ರವರೆಗೆ ಜ್ಞಾನ ಭಾರತಿ ಆವರಣದಲ್ಲಿ ನಡೆಯುವ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ ಮಾಡಿ, ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಅಲ್ಲಿಂದಲೇ 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐಗಳ ಲೋಕಾರ್ಪಣೆಗೊಳಿಸಲಿದ್ದಾರೆ.


ಇದನ್ನೂ ಓದಿ : ಶ್ರೀರಾಮ, ಸೀತಾಮಾತೆಗೆ ಅವಮಾನ: ಡಿಕೆಶಿ ರಾಜೀನಾಮೆಗೆ ಬಿಜೆಪಿ ಆಗ್ರಹ


ಇದಾದ ಬಳಿಕ ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದು, ಸಂಜೆ 4.50ಕ್ಕೆ ಮೈಸೂರಿನಲ್ಲಿ ಲ್ಯಾಂಡ್ ಆಗಲಿದ್ದಾರೆ. ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್‌ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಸಂಜೆ 6.3೦ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ವೇದ ಪಾಠ ಶಾಲಾ ಕಟ್ಟಡ ಲೋಕಾರ್ಪಣೆಗೊಳಿಸಲಿದ್ದಾರೆ. ರಾತ್ರಿ 7.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಂತರ ರಾತ್ರಿ 8.10ಕ್ಕೆ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಪ್ರಧಾನಿ ಮೋದಿಯವರನ್ನು ಬೆಂಗಳೂರಿಗೆ ಕರೆಸಿ ವಿವಿಧ ಕಾರ್ಯಕ್ರಮ ಆಯೋಜಿಸುವ ಮೂಲಕ ಬೆಂಗಳೂರಿಗರ ಮನ ಗೆಲ್ಲಲು ಬಿಜೆಪಿ ಹೊರಟಿದೆ. ಇದು ಎಷ್ಟರಮಟ್ಟಿಗೆ ‌ಪ್ಲಸ್ ಆಗುತ್ತದೆ ಅನ್ನೋದನ್ನ ಕಾದುನೋಡಬೇಕಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.