ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರದಂದು 2,000 ಮುಖಬೆಲೆಯ ಬ್ಯಾಂಕ್ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲಿದೆ ಎಂದು ಘೋಷಿಸಿದ ಬೆನ್ನಲ್ಲೇ ರಾಜ್ಯದ ನಿಯೋಜಿತ ಸಿಎಂ ಸಿದ್ಧರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ."ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇಶಗಳು ಈಡೇರಿವೆ ಎನ್ನುವುದನ್ನು ದೇಶದ ಜನರಿಗೆ ಮೊದಲು ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ರೂ.2000 ಮೌಲ್ಯದ ನೋಟು ನಿಷೇಧಿಸುವುದಿದ್ದರೆ 2016ರಲ್ಲಿ ಅದನ್ನು ಚಲಾವಣೆಗೆ ತಂದದ್ದು ಯಾಕೆ? ಯಾವ ಕಾರಣಕ್ಕಾಗಿ ಈಗ ಇದನ್ನು ನಿಷೇಧಿಸಲಾಗಿದೆ? ಕಪ್ಪು ಹಣವನ್ನು ನಿಯಂತ್ರಿಸುವ ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಮೋದಿಯವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಅವರು ಕಿಡಿ ಕಾರಿದ್ದಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.