ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಬೇರೆ ಬೇರೆ ಸಂದರ್ಭಗಳಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡುತ್ತಾ ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿ ಮೂರು ಕೃಷಿ ಕಾನೂನುಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಹೀಗೆ ಪರೋಕ್ಷವಾಗಿ ಸಂದೇಶ ರವಾನಿಸುವ ಬದಲು ನೇರವಾಗಿ ರೈತರ ಜೊತೆ ಕುಳಿತು ಚರ್ಚೆ ಮಾಡಿ ಬಿಕ್ಕಟ್ಟು ಬಗೆಹರಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸಲಹೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ' ಎಂದಿದ್ದಾರೆ.


Farmers) ಅನಾನುಕೂಲವೂ ಆಗಬಾರದು' ಎಂದು ಹೇಳಿದ್ದಾರೆ.


ಜೈವಿಕ ಕೃಷಿ ಪದ್ಧತಿ ಉತ್ತೇಜಿಸಲು ವಿನಯ್ ಗುರೂಜಿ ಮನವಿ


'ಕೇಂದ್ರ ಸರ್ಕಾರ (Central Government) ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ' ಎಂದು ತಿಳಿಸಿದ್ದಾರೆ.


'ಕಾಯ್ದೆ ಬಗ್ಗೆ ಕೇಂದ್ರ ಸಚಿವ @rajnathsingh ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು' ಎಂದು ಆಗ್ರಹಿಸಿದ್ದಾರೆ.


Farmers: ರೈತರಿಗೊಂದು 'ಸಿಹಿ ಸುದ್ದಿ' ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್..!


ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಎಚ್‌.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.