ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಮಹಾದಾಯಿ ವಿಚಾರದಲ್ಲಿ ಪ್ರಧಾನಿ ತಮ್ಮ ಮಾತು ಉಳಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಹಾದಾಯಿ ಸಮಸ್ಯೆಯನ್ನು ಮೂರು ತಿಂಗಳಲ್ಲಿ ಇತ್ಯರ್ಥ ಪಡಿಸುವ ಮಾತನಾಡಿದ್ದರು ಈ ಕುರಿತಾಗಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಧಾನಿಯವರು ತಮ್ಮ ಮಾತನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾಲಮನ್ನಾ ವಿಚಾರವಾಗಿ ಮಾತನಾಡಿದ ಅವರು ಮಾಧ್ಯಮಗಳಲ್ಲಿ ರೈತರ ಸಾಲಮನ್ನಾ ವಿಚಾರವಾಗಿ ಕುಮಾರಸ್ವಾಮಿ ಯು ಟರ್ನ್ ಎಂದು ಹೇಳುತ್ತಿದ್ದಾರೆ. ಆದರೆ ಇದು ಸಮಿಶ್ರ ಸರ್ಕಾರವಾಗಿರುವುದರಿಂದ ಕಾಂಗ್ರೆಸ್ ಪಕ್ಷದ ಜೊತೆ ಸೇರಿ ಈ ವಿಚಾರವಾಗಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ತಮ್ಮನ್ನು ರಾಜಕೀಯ ಶಿಶು ಎಂದು ಕರೆದುಕೊಂಡ ಅವರು ಹಲವಾರು ಪರಿಸ್ಥಿತಿಗಳ ಹಿನ್ನಲೆಯಲ್ಲಿ ತಾವು ಇಂದು ಮುಖ್ಯಮಂತ್ರಿಗಳಾಗಲು ಸಾಧ್ಯವಾಯಿತು ಎಂದು ತಿಳಿಸಿದರು.