ಬೆಂಗಳೂರು: ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ಮೋದಿ ಅವರು ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40% ಗೆ ಏರಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ಬಿಬಿಎಂಪಿ : ಘನತ್ಯಾಜ್ಯ ನಿರ್ವಹಣೆಗೆ ಕಾರ್ಯಕ್ಕೆ ಮತ್ತೆ ಟೆಂಡರ್


ಅವರು ಅರಮನೆ ಮೈದಾನದಲ್ಲಿ ನಡೆದ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ಇದನ್ನೂ ಓದಿ- ಮಕ್ಕಳು ಬಾಲ ನಟ, ನಟಿಯಾಗಿ ನಟನಾ ಕೆಲಸ ಮಾಡಲು ಅನುಮತಿ ಕಡ್ಡಾಯ


ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು.ನಾವು ಯುವ ನಿಧಿಯನ್ನೂ ಕೊಡುತ್ತೇವೆ, ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ವಿದ್ಯಾರ್ಥಿ ಮತ್ತು ಯುವಜನರಿಗೆ ಮೇಲಿರುವ ನಮ್ಮ ಸರ್ಕಾರದ ಅಭಯ. ಎಂದು ಭರವಸೆ ನೀಡಿದರು.


ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ ಜಿಟಿಡಿಸಿ ಗಳ ಜತೆಗೆ ಹೊಸದಾಗಿ ಇನ್ನಷ್ಟು ಜಿಟಿಡಿಸಿಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು,ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿ ಯುವ ಜನರು ಹಾಜರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.