ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಖರ್ಚು ಮಾಡಿದ ಹಣವನ್ನೇ ಗ್ರಾಮದ ಅಭಿವೃದ್ದಿಗೆ ಬಳಸಬಹುದಿತ್ತು ಎಂದು ಕರ್ನಾಟಕ ಬಿಜೆಪಿ ಟೀಕಿಸಿದೆ.


COMMERCIAL BREAK
SCROLL TO CONTINUE READING

"ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಪ್ರಚಾರಕ್ಕಾಗಿ, ಸಾಂಸ್ಕೃತಿಕ ಕಾರ್ಯಕ್ರಮ, ಐಶಾರಾಮಿ ಆಹಾರ, ವಾಸ್ತವ್ಯ ಈ ಎಲ್ಲದಕ್ಕೂ ಸಾಕಷ್ಟು ಹಣ ದುಂಡು ವೆಚ್ಚ ಮಾಡಲಾಗಿದೆ. ಈ ಹಣವನ್ನು ಗ್ರಾಮದ ಅಭಿವೃದ್ಧಿಗೆ ಬಳಸಬಹುದಿತ್ತು" ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದೆ.



ಅಷ್ಟೇ ಅಲ್ಲದೆ "ತೆರಿಗೆ ಪಾವತಿದಾರರ ಸಾಕಷ್ಟು ಹಣವನ್ನು ಗ್ರಾಮವಾಸ್ತವ್ಯದ ಮೂಲಕ ಕುಮಾರಸ್ವಾಮಿ ಅವರ ವರ್ಚಸ್ಸು ಹೆಚ್ಚಿಸಲು ಬಳಸಿಕೊಳ್ಳಲಾಗಿದೆ" ಎಂದೂ ಸಹ ಬಿಜೆಪಿ ಆರೋಪಿಸಿದೆ. 


ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ರಾಮವಾಸ್ತವ್ಯ ಹೂಡಲಿದ್ದು, ಗ್ರಾಮದ ಸಮಸ್ಯೆಗಳ ಬಗ್ಗೆ ಜನರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆ ಆಲಿಸಲಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿಯೂ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಹೂಡಿದ್ದರು. ಈ ಕಾರ್ಯಕ್ರಮ ಅವರಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿತ್ತು.