ಬೆಂಗಳೂರು : ರಾಜ್ಯದಲ್ಲಿ ಕಳೆದ 4 -5 ದಿನಗಳಿಂದ ಕೆಲವು ಜಿಲ್ಲೆಗಳಲ್ಲಿ ಭಾರೀ ಆಗುತ್ತಿದೆ. ಇಂದು ಕೇರಳಕ್ಕೆ ಪ್ರವೇಶಿಸಬೇಕಿದ್ದ ಮುಂಗಾರು 3 ದಿನ ತಡವಾಗಿ ಪ್ರವೇಶಿಸಲಿದೆ.


COMMERCIAL BREAK
SCROLL TO CONTINUE READING

ಕೇರಳಕ್ಕೆ ಮುಂಗಾರು(Monsoon) ಪ್ರವೇಶದ ಪರಿಣಾಮವಾಗಿ ನಾಳೆಯಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 5 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.


ಇದನ್ನೂ ಓದಿ : ರಾಜ್ಯದ ಇಬ್ಬರು ಮಕ್ಕಳಲ್ಲಿ ಕಪ್ಪು ಶೀಲಿಂದ್ರ ಸೋಂಕು ಪತ್ತೆ


ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ 3 ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ(Meteorological Department) ಹೇಳಿದೆ.


ಇದನ್ನೂ ಓದಿ : Black Fungus Cases : ರಾಜ್ಯದಲ್ಲಿ 1250 ಮಂದಿಗೆ ಬ್ಲಾಕ್ ಫಂಗಸ್: 35 ಮಂದಿ ಸಾವು!


ಇಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎನ್ನಲಾಗಿತ್ತು. ಆದರೆ, ಜೂನ್ 3ರಿಂದ ಕೇರಳದಲ್ಲಿ ಮುಂಗಾರು ಮಳೆ(Monsoon Rain)ಯಾಗಲಿದೆ. ಜೂನ್ 1ರಿಂದ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಇದನ್ನೂ ಓದಿ : Lockdown Extension : ರಾಜ್ಯದಲ್ಲಿ ಲಾಕ್​ಡೌನ್ ವಿಸ್ತರಣೆ : ಸಿಎಂ ಬಿಎಸ್‌ವೈ ಹೇಳಿದ್ದೇನು?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ