Heavy Rainfall : ಮೇ 31ಕ್ಕೆ ಮುಂಗಾರು ಪ್ರವೇಶ : ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ!
ಜೂನ್ ಮೊದಲ ವಾರದ ಕೊನೆಗೆ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ.
ಬೆಂಗಳೂರು : ನೈಋತ್ಯ ಮಾನ್ಸೂನ್ ಮಾರುತಗಳು ಪೂರ್ವಕೇಂದ್ರದ ಬಂಗಾಳ ಕೊಲ್ಲಿಯತ್ತ ಸಾಗಿದ್ದು, ಮೇ 31ರ ವೇಳೆಗೆ ಕೇರಳ ಪ್ರವೇಶದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಮುಂಗಾರು ಮಳೆ ಸುರಿಸುವ ನೈಋುತ್ಯ ಮಾನ್ಸೂನ್ ಮಾರುತಗಳು ಮೇ 31ರಂದು ಕೇರಳ ಪ್ರವೇಶಿಸಲಿದ್ದು, ಜೂನ್ ಮೊದಲ ವಾರದ ಕೊನೆಗೆ ರಾಜ್ಯದಲ್ಲಿ ಮುಂಗಾರು ಮಳೆ(Mungaru Male) ಆರಂಭವಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಸೃಷ್ಟಿಯಾದ 2 ಚಂಡಮಾರುತಗಳೇ ಮಾನ್ಸೂನ್ ಮಾರುತಗಳ ಈ ಚಲನೆಗೆ ಕಾರಣ ಎನ್ನಲಾಗಿದೆ. ಕಳೆದ ವಾರವಷ್ಟೇ ಟೌಕ್ಟೇ ಚಂಡಮಾರುತದಿಂದಾಗಿ ಸಾಕಷ್ಟು ರಾಜ್ಯಗಳು ನಲುಗಿ ಹೋಗಿದ್ದವು. ಇದೀಗ ಅದರ ಬೆನ್ನಲ್ಲೇ ಯಾಸ್ ಚಂಡಮಾರುತ ಕೂಡ ಅಪ್ಪಳಿಸಿದೆ. ಹೀಗಾಗಿ ಮಾನ್ಸೂನ್ ಮಾರುತಗಳ ಚಲನೆಯಲ್ಲಿ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ : HD Kumaraswamy : 'ಹಿಂದೆ ಮಾಡಿದ್ದ ಪಾಪದ ಫಲವನ್ನ ಇಂದು ಬಿಜೆಪಿ ಅನುಭವಿಸುತ್ತಿದೆ'
ಮಾಲ್ಡೀವ್ಸ್-ಕೊಮೊರಿನ್ ಪ್ರದೇಶದ ಕೆಲವು ಭಾಗಗಳಲ್ಲಿ ಮಾನ್ಸೂನ್(Monsoon) ಈಗಾಗಲೇ ಪ್ರವೇಶಿಸಿದೆ. ಪಶ್ಚಿಮ ಬಂಗಾಳದ ನೈಋತ್ಯ ಮತ್ತು ಪೂರ್ವ ಕೇಂದ್ರ, ಆಗ್ನೇಯ ಕೊಲ್ಲಿಯ ಹೆಚ್ಚಿನ ಭಾಗ ಹಾಗೂ ಪಶ್ಚಿಮ ಕೇಂದ್ರ ಕೊಲ್ಲಿಯ ಕೆಲವು ಭಾಗಗಳಿಗೆ ಗುರುವಾರದ ವೇಳೆಗೆ ಮಾನ್ಸೂನ್ ಪ್ರವೇಶಿಸಿದೆ.
ಇದನ್ನೂ ಓದಿ : " ಮಹಿಳೆಯರ ಆತ್ಮಗೌರವ ರಕ್ಷಣೆಗಾಗಿ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಲಿ "
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.