ಬೆಂಗಳೂರು : 2020-21 ನೇ ಸಾಲಿಗೆ ಧಾರವಾಡ ಜಿಲ್ಲೆಯಲ್ಲಿನ ನಾಲ್ಕು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

5ನೇ ತರಗತಿ ಪಾಸಾದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ (ಒಬಿಸಿ) ಶೇ.25 ರಷ್ಟು ಸೀಟು ಲಭ್ಯವಿದೆ.


ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕು ಅಂಚಟಗೇರಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ.1 ಮತ್ತು ನಂ.2, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಧಾರವಾಡ ಗ್ರಾಮೀಣ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಹೆಣ್ಣುಮಕ್ಕಳ ವಸತಿ ಶಾಲೆಗಳ ಪ್ರವೇಶಕ್ಕಾಗಿ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.


ವಸತಿ ಶಾಲೆಗಳಲ್ಲಿ ಉಚಿತ ಊಟ, ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರಗಳೊಂದಿಗೆ ಇನ್ನಿತರೇ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಪ್ರವೇಶ ಬಯಸುವ ಅಲ್ಪಸಂಖ್ಯಾತರ ಮತ್ತು ಇತರೇ ಪ್ರವರ್ಗಗಳ ಆಸಕ್ತ ವಿದ್ಯಾರ್ಥಿಗಳು ಸಂಬಂಧಿಸಿದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ, ಹುಬ್ಬಳ್ಳಿ ತಾಲ್ಲೂಕಾ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯ ಮಿನಿವಿಧಾನಸೌಧ, ಹುಬ್ಬಳ್ಳಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮಂದಿ ಪ್ಲಾಜಾ, 1 ನೇ ಮಹಡಿ ಕೆ.ಸಿ.ಪಾರ್ಕ್, ಪೋಸ್ಟ್ ಆಫೀಸ್ ಎದುರಿಗೆ ಹಳಿಯಾಳ ರಸ್ತೆ, ಧಾರವಾಡ-580008 ಇಲ್ಲಿ ಅರ್ಜಿಗಳನ್ನು ಪಡೆದು, ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ವಸತಿ ಶಾಲೆಗಳಲ್ಲಿ ಜುಲೈ-2020 ರೊಳಗೆ ಸಲ್ಲಿಸಬಹುದಾಗಿದೆ.


ಹೆಚ್ಚಿನ ವಿವರಗಳಿಗಾಗಿ ಪ್ರಾರ್ಚಾಯರು, ಅಸಂಮೊದೇವಶಾ ಅಂಚಟಗೇರಿ ನಂ.1–8861152580, 9738941252, ಪ್ರಾರ್ಚಾಯರು, ಅಸಂಮೊದೇವಶಾ ಅಂಚಟಗೇರಿ ನಂ.2 – 9448054139, 8904197286, ಧಾರವಾಡ ಗ್ರಾಮೀಣ, (ಜಿಲ್ಲಾ ಕಚೇರಿ)-0836-2445590-2445591 ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಡಾ|| ಅಬ್ದುಲ್ ರಶೀದ. ಮಿರ್ಜನ್ನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.