Siddaramosthava: ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ಕ್ಕೆ ಸಿದ್ಧಗೊಂಡ ಬೃಹತ್ ವೇದಿಕೆ

ಕಾರ್ಯಕ್ರಮಕ್ಕೆ 6 ರಿಂದ 8 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, 100ಕ್ಕೂ ಹೆಚ್ಚು ಊಟದ ಕೌಂಟರ್ ವ್ಯವಸ್ಥೆ ಮಾಡಲಾಗಿದೆ.

Written by - Puttaraj K Alur | Last Updated : Aug 3, 2022, 10:46 AM IST
  • ಇಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ
  • ‘ಸಿದ್ದರಾಮೋತ್ಸವ’ದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶಿಸಲಿರುವ ಸಿದ್ದರಾಮಯ್ಯ
  • ಕಾರ್ಯಕ್ರಮಕ್ಕೆ ಹರಿದುಬರುತ್ತಿರುವ ಜನಸಾಗರ, 6-8 ಲಕ್ಷ ಮಂದಿ ಸೇರುವ ನಿರೀಕ್ಷೆ
Siddaramosthava: ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ಕ್ಕೆ ಸಿದ್ಧಗೊಂಡ ಬೃಹತ್ ವೇದಿಕೆ title=
ಇಂದು ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬ

ದಾವಣಗೆರೆ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಲಾಗಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದೆ.

ಬರೋಬ್ಬರಿ 150 ಜನರು ಕುಳಿತುಕೊಳ್ಳಲು ವೇದಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸಿದ್ದರಾಮಯ್ಯನವರು ಅಮೃತ ಮಹೋತ್ಸವದ ಕೇಂದ್ರ ಬಿಂದುವಾಗಿದ್ದು, ಎಐಸಿಸಿ ವರಿಷ್ಟ ರಾಹುಲ್ ಗಾಂಧಿ ಸೇರಿ ಕೇಂದ್ರ ಕಾಂಗ್ರೆಸ್‍ನ ಹಲವಾರು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿವಿಐಪಿ, ವಿಐಪಿ, ಪಕ್ಷದ ನಾಯಕರು, ಮಾಜಿ ಸಚಿವರು, ಪಕ್ಷದ ಮುಖಂಡತು ಮತ್ತು ಸಿದ್ದರಾಮಯ್ಯ ಆಪ್ತರಿಗೆ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಕಾಡುಗಳ್ಳರಿಗೆ ಸಿಂಹಸ್ವಪ್ನವಾಗಿದ್ದ ಬಂಡೀಪುರದ ‘ರಾಣಾ’ ಇನ್ನಿಲ್ಲ

ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ದಾವಣಗೆರೆ ಹೊರಭಾಗದ 50 ಎಕರೆ ಪ್ರದೇಶದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, 5 ಲಕ್ಷ ಜನರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮಕ್ಕೆ 6 ರಿಂದ 8 ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, 100ಕ್ಕೂ ಹೆಚ್ಚು ಊಟದ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಸಿದ್ದರಾಮಯ್ಯರ ಅಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ 48ರಲ್ಲಿ ಜನಜಂಗುಳಿ ಹೆಚ್ಚಾಗಿದೆ. ನಾಲ್ಕೈದು ಕಿ.ಮೀ ಗಳಿಂದ ವೇದಿಕೆಗೆ ಜನರು ನಡೆದುಕೊಂಡು ಬರುತ್ತಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಸುಧಾಕರ್

ಈಗಾಗಲೇ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸಿದ್ದರಾಮಯ್ಯನವರು ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಉದ್ದೇಶದಿಂದ ಇಂದು ಸಿದ್ದರಾಮಯ್ಯರ ಶಕ್ತಿಪ್ರದರ್ಶನ ನಡೆಯಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ ಎಂದು ಈಗಾಗಲೇ ಸಿದ್ದರಾಮಯ್ಯನವರು ಹೇಳಿದ್ದಾರೆ. ಭ್ರಷ್ಟಾಚಾರದ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಇಂದು ಸಿದ್ದರಾಮಯ್ಯ ಗುಡುಗಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News