ಚಾಮರಾಜನಗರ: ಬಟ್ಟೆ ಒಗೆಯುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ಶುಕ್ರವಾರ (ಏಪ್ರಿಲ್ 05)  ಮಧ್ಯಾಹ್ನ ನಡೆದಿದೆ.


COMMERCIAL BREAK
SCROLL TO CONTINUE READING

ಹನೂರು ತಾಲೂಕಿನ ಗೋಪಿನಾಥಂ ಸಮೀಪವಿರುವ ಪುದೂರು ಗ್ರಾಮದ ಮೀನಾ(34), ಪವಿತ್ರಾ(14) ಹಾಗೂ ಕೀರ್ತಿ(11)  ಮೃತರಾಗಿದ್ದು ಬಾಲಕ ಸುರೇಂದ್ರನಿಂದ ತಾಯಿ ಹಾಗೂ ಮಕ್ಕಳು ಮೃತಪಟ್ಟಿದ್ದು ಬೆಳಕಿಗೆ ಬಂದಿದೆ. 


ಇದನ್ನೂ ಓದಿ- ಚೆಕ್ ಪೋಸ್ಟ್ ಗಳಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರಿಂದ ವಾಹನ ತಪಾಸಣೆ


ಪುದೂರು ನಿವಾಸಿಗಳಾದ ಮೀನಾ ಪುತ್ರಿಯರಾದ ಪವಿತ್ರಾ, ಕೀರ್ತಿ, ಮಗ ಸುರೇಂದ್ರ ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದಾರೆ. ಬಟ್ಟೆ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋಗಿ ತಾಯಿ ಮೀನಾ ಆಕಸ್ಮಿಕವಾಗಿ ಕಾಲು ಜಾರಿಬಿದಿದ್ದಾರೆ. ತಕ್ಷಣ ಇಬ್ಬರೂ ಹೆಣ್ಣು ಮಕ್ಕಳಾದ ಕೀರ್ತಿ ಹಾಗೂ ಪವಿತ್ರಾ ತಾಯಿಯನ್ನು ರಕ್ಷಣೆ ಮಾಡಲು ಹೋಗಿ ಇವರು ಸಹ ಮುಳುಗಿದ್ದಾರೆ. ಸ್ಥಳದಲ್ಲಿಯೇ ಇದ್ದ ಮಗ ಸುರೇಂದ್ರ ತಂದೆಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರು ಅಸುನೀಗಿದ್ದರು.


ಇದನ್ನೂ ಓದಿ- ಜೂನ್ 4ರ ನಂತರ ರಾಜ್ಯ ಸರ್ಕಾರದ ದಿನಗಣನೆ ಆರಂಭ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ


ಬಳಿಕ, ಗ್ರಾಮಸ್ಥರ  ಸಹಾಯದಿಂದ ಮೂವರ  ಶವ ಹೊರ ತೆಗೆದು  ಮರಣೋತ್ತರ ಪರೀಕ್ಷೆಗಾಗಿ ಮಲೆ ಮಹದೇಶ್ವರ ಬೆಟ್ಟ ಆಸ್ಪತ್ರೆಗೆ ಕಳುಹಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.