ಬೆಂಗಳೂರು : Mother Daughter Suicide : ನಾಯಿ ಸಾಕುವ ವಿಚಾರಕ್ಕೆ ಆರಂಭವಾದ ಗಲಾಟೆ ಆತ್ಮಹತ್ಯೆಯಲ್ಲಿ ಅಂತ್ಯ ಕಂಡಿದೆ. ನಾಯಿ ಸಾಕುವ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ದಿವ್ಯಾ ಮನೆಯಲ್ಲಿ ನಾಯಿ ಸಾಕುತ್ತಿದ್ದರು. ಆದರೆ ದಿವ್ಯಾ, ಉಸಿರಾಟ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದರು. ಮನೆಯಲ್ಲಿ ನಾಯಿ ಇದ್ದರೆ ಕಾಯಿಲೆ ವಾಸಿಯಾಗುವುದಿಲ್ಲ ಎಂದು ದಿವ್ಯಾಗೆ ವೈದ್ಯರು ತಿಳಿಸಿದ್ದರು ಎನ್ನಲಾಗಿದೆ. ಹೀಗಾಗಿ ಮನೆಯಲ್ಲಿ ನಾಯಿಯನ್ನು ಇಟ್ಟುಕೊಳ್ಳುವುದು ಬೇಡ, ನಾಯಿಯನ್ನ ಯಾರಿಗಾದರೂ ಕೊಟ್ಟು ಬಿಡೋಣ ಎಂದು ಅತ್ತೆ ಮಾವನ ಬಳಿ ದಿವ್ಯಾ ಹೇಳಿಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ : Namma Metro : ಪ್ರಯಾಣಿಕರ ಗಮನಕ್ಕೆ : ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಆದರೆ ಪ್ರೀತಿಯಿಂದ ಸಾಕಿದ ನಾಯಿಯನ್ನು ಮನೆಯಿಂದ ಹೊರಗೆ ಕಳುಹಿಸುವುದು ದಿವ್ಯಾ ಅತ್ತೆ ಮತ್ತು ಮಾವನಿಗೆ ಇಷ್ಟವಿರಲಿಲ್ಲ. ಈ ಹಿನ್ನೆಲೆಯಲ್ಲಿ ನಾಯಿಯನ್ನು ಮನೆಯಿಂದ ಕಳಿಸಲು ಅತ್ತೆ ಮಾವ ಇಬ್ಬರೂ ಒಪ್ಪಿರಲಿಲ್ಲ. ಇದೇ ವಿಚಾರಕ್ಕೆ ದಿವ್ಯಾ ಹಾಗೂ ಅತ್ತೆ ಮಾವನ ನಡುವೆ ಗಲಾಟೆ ನಡೆಯುತ್ತಿತ್ತು. ಆದರೆ ಈ ಗಲಾಟೆ ಮೂರು ದಿನಗಳ ಹಿಂದೆ ಆತ್ಮಹತ್ಯೆಯಲ್ಲಿ ಅಂತ್ಯ ಕಂಡಿದೆ. ಘಟನೆಯಿಂದ ಮನನೊಂದಿರುವ ದಿವ್ಯಾ ಮತ್ತು ಅವರ ಪುತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲು
ಇದನ್ನೂ ಓದಿ : "ಕಾರ್ಮಿಕರ ಬದುಕನ್ನು ಹಸನ ಮಾಡಲು ರಾಹುಲ್ ಗಾಂಧಿಯವರು ಹೋರಾಟ ಮಾಡುತ್ತಿದ್ದಾರೆ"-ಡಿಕೆಶಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.