ಬಿಜೆಪಿಗೆ ಗುಡ್ ಬೈ ಹೇಳಿದ ಸಂಸದ ಕರಡಿ ಸಂಗಣ್ಣ! ನಾಳೆ ಕಾಂಗ್ರೆಸ್ ಸೇರ್ಪಡೆ..?
Sanganna Karadi resigns from BJP: ಸಂಗಣ್ಣರಿಗೆ ಈ ಬಾರಿ ಟಿಕೆಟ್ ನೀಡದೆ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್‌ಗೆ ಟಿಕೆಟ್ ನೀಡಲಾಗಿತ್ತು. ಹೀಗಾಗಿ ಆರಂಭದಿಂದಲೂ ಅಸಮಾಧಾನ ಹೊರಹಾಕಿದ್ದ ಸಂಗಣ್ಣ ಅವರು, ತಮಗೇ ಟಿಕೆಟ್ ನೀಡಬೇಕು ಅಂತಾ ಪಟ್ಟು ಹಿಡಿದಿದ್ದರು.
ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಅವರು ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಗಣ್ಣ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ತಮ್ಮ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿರುವ ಸಂಗಣ್ಣ ಅವರು ಇ-ಮೇಲ್ ಮೂಲಕ ಸ್ಪೀಕರ್ ಓಂ ಬಿರ್ಲಾಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆಂದು ತಿಳಿದುಬಂದಿದೆ.
ಇದನ್ನೂ ಓದಿ: ಡಿಕೆಶಿ ಹೆಣ್ಣು ಮಗಳನ್ನು ಕಿಡ್ನಾಪ್ ಮಾಡಿ ಆಸ್ತಿ ಲಪಟಾಯಿಸಿರುವುದು ನಿಜ: ಡಿಕೆಶಿಗೆ ತಿರುಗೇಟು ಕೊಟ್ಟ HDK
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ನಡೆಸಿದ್ದ ಸಂಧಾನ ವಿಫಲವಾಗಿದ್ದು, ಈಗ ಅಧಿಕೃತವಾಗಿ ಬಿಜೆಪಿಗೆ ರಾಜೀನಾಮೆ ನೀಡಿರುವ ಸಂಗಣ್ಣ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾದಂತಾಗಿದೆ. ಸಂಗಣ್ಣರಿಗೆ ಈ ಬಾರಿ ಟಿಕೆಟ್ ನೀಡದೆ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್‌ಗೆ ಟಿಕೆಟ್ ನೀಡಲಾಗಿತ್ತು. ಹೀಗಾಗಿ ಆರಂಭದಿಂದಲೂ ಅಸಮಾಧಾನ ಹೊರಹಾಕಿದ್ದ ಸಂಗಣ್ಣ ಅವರು, ತಮಗೇ ಟಿಕೆಟ್ ನೀಡಬೇಕು ಅಂತಾ ಪಟ್ಟು ಹಿಡಿದಿದ್ದರು.
ಇದಕ್ಕೆ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ಬಿಜೆಪಿ ನಾಯಕರು ಸೊಪ್ಪು ಹಾಕಿರಲಿಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವಾಗಿ ಸಂಗಣ್ಣರಿಗೆ ಭರವಸೆ ನೀಡುವ ಮೂಲಕ ಮನವೊಲಿಸುವ ಪ್ರಯತ್ನ ನಡೆಸಲಾಗಿತ್ತು. ಇದಕ್ಕೆ ನೋ ಎಂದಿರುವ ಸಂಗಣ್ಣ ಅಂತಿಮವಾಗಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಇದನ್ನೂ ಓದಿ: ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿ
ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ!
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿಯೇ ಸಂಗಣ್ಣ ಅವರು ಬಿಜೆಪಿಗೆ ರಾಜೀನಾಮೆ ನಿಡಿದ್ದಾರೆಂದು ತಿಳಿದುಬಂದಿದೆ. ಶಾಸಕ ಲಕ್ಷ್ಮಣ ಸವದಿಯವರು ಸಂಗಣ್ಣರಣ್ಣು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಕೊಪ್ಪಳದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರು ಸಂಗಣ್ಣರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ತೊರೆದಿರುವ ಸಂಗಣ್ಣನವರು ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.