Kota Srinivas Poojary: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃ ವಿಯೋಗ

ಲಚ್ಚಿ ಪೂಜಾರ್ತಿ ಕೃಷಿಕರಾಗಿದ್ದರು. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರಿದ ಪ್ರತಿ ಸಂದರ್ಭದಲ್ಲಿಯೂ ಕೋಟ ಶ್ರೀನಿವಾಸ ಪೂಜಾರಿಯವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಇದಲ್ಲದೆ ಚುನಾವಣೆ ವೇಳೆ ತಮ್ಮ ತಾಯಿಯೊಂದಿಗೆ ತೆರಳಿ ಮತ ಚಲಾಯಿಸುತ್ತಿದ್ದರು. 

Written by - Puttaraj K Alur | Last Updated : Jun 30, 2024, 10:15 PM IST
  • ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃ ವಿಯೋಗ
  • ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ವಿಧಿವಶ
  • ಕೋಟ ಶ್ರೀನಿವಾಸ ಪೂಜಾರಿಯವರ ತಾಯಿಯ ನಿಧನಕ್ಕೆ ರಾಜಕೀಯ ಗಣ್ಯರಿಂದ ಸಂತಾಪ
Kota Srinivas Poojary: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃ ವಿಯೋಗ title=
ಕೋಟ ಶ್ರೀನಿವಾಸ ಪೂಜಾರಿಗೆ ಮಾತೃ ವಿಯೋಗ

MP Kota Srinivas Poojary's mother passes away: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗವಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಅವರು ಭಾನುವಾರ ವಿಧಿವಶರಾಗಿದ್ದಾರೆ. 

ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ

ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಲಚ್ಚಿ ಪೂಜಾರ್ತಿ ಕೃಷಿಕರಾಗಿದ್ದರು. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರಿದ ಪ್ರತಿ ಸಂದರ್ಭದಲ್ಲಿಯೂ ಕೋಟ ಶ್ರೀನಿವಾಸ ಪೂಜಾರಿಯವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಇದಲ್ಲದೆ ಚುನಾವಣೆ ವೇಳೆ ತಮ್ಮ ತಾಯಿಯೊಂದಿಗೆ ತೆರಳಿ ಮತ ಚಲಾಯಿಸುತ್ತಿದ್ದರು. 

ಇದನ್ನೂ ಓದಿ: ಜಾರಕಿಹೊಳಿ ಬ್ರದರ್ಸ್ ಮಣಿಸಲು ಲಕ್ಷ್ಮಣ ಸವದಿಗೆ ಒಲಿಯುತ್ತಾ ಕೆಪಿಸಿಸಿ ಪಟ್ಟ..!?

ತಮ್ಮ ಯಶಸ್ಸಿನಲ್ಲಿ ತಾಯಿಯವರ ಪಾತ್ರ ಮಹತ್ವದ್ದು ಎಂದು ಕೋಟ ಶ್ರೀನಿವಾಸ ಪೂಜಾರಿಯವರು ಯಾವಾಗಲೂ ಸ್ಮರಿಸುತ್ತಿದ್ದರು. ಲಚ್ಚಿ ಪೂಜಾರ್ತಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಲಿ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಸೇರಿದಂತೆ ಹಲವರು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News