ಬಿಜೆಪಿ ಅಭ್ಯರ್ಥಿ ಬಾಲರಾಜ್ ಗೆ ಬೆಂಬಲ‌ ಘೋಷಿಸಿದ ಸಂಸದ ಶ್ರೀನಿವಾಸಪ್ರಸಾದ ಅಳಿಯ

ಕಳೆದ 7 ವರ್ಷಗಳಿಂದ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡುವ ಜೊತೆಗೆ ಆರೋಗ್ಯ ಶಿಬಿರಗಳು, ಸಾಮಾಜಿಕ ಸೇವಾ ಕಾರ್ಯಗಳು ಮಾಡಿಕೊಂಡು, ಕ್ಷೇತ್ರದಜನರಿಗೆ ಚಿರಪರಿಚತನಾಗಿದ್ದೆ. ಮುಂದೆಯು ಸಹ ನನ್ನ ಸೇವೆಯನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಬಿಜೆಪಿ ಸದಸ್ಯನಾಗಿರುತ್ತೇನೆ. ಸರ್ಕಾರಿ ಹುದ್ದೆಯನ್ನು ತ್ಯಜಿಸಿ ರಾಜಕೀಯ ಪದಾರ್ಪಣೆ ಮಾಡಿದ್ದೇನೆ. 

Written by - Yashaswini V | Last Updated : Mar 19, 2024, 11:43 AM IST
  • ಬಿಜೆಪಿ ದೇಶದ ದೊಡ್ಡ ಪಕ್ಷ. ಅತಿ ದೊಡ್ಡ ಕಾರ್ಯಕರ್ತರ ಪಡೆಯನ್ನು ಹೊಂದಿದೆ.
  • ರಾಷ್ಟ್ರೀಯ ವಿಚಾರಧಾರೆಗಳನ್ನು ಹೊಂದಿರುವ ಏಕೈಕ ಪಕ್ಷ.
  • ವ್ಯಕ್ತಿಗಿಂತ ಪಕ್ಷದ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ- ಸಂಸದ ಶ್ರೀನಿವಾಸಪ್ರಸಾದ ಅಳಿಯ ಡಾ. ಎನ್.ಎಸ್. ಮೋಹನ್
ಬಿಜೆಪಿ ಅಭ್ಯರ್ಥಿ ಬಾಲರಾಜ್ ಗೆ ಬೆಂಬಲ‌ ಘೋಷಿಸಿದ ಸಂಸದ ಶ್ರೀನಿವಾಸಪ್ರಸಾದ ಅಳಿಯ  title=

ಚಾಮರಾಜನಗರ: ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ಎಲ್ಲರು ಸಹ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಎಸ್. ಬಾಲರಾಜು ಅವರ ಪರವಾಗಿ ಕೆಲಸ ಮಾಡಿ, ಲೋಕಸಭೆಗೆ ಕಳುಹಿಸುವ ಮೂಲಕ ಶಕ್ತಿ ತುಂಬೋಣ ಎಂದು ಬಿಜೆಪಿ ಟಿಕೆಟ್ ನ ಪ್ರಮುಖ ಆಕಾಂಕ್ಷಿಯಾಗಿದ್ದ, ಸಂಸದ ವಿ.ಶ್ರಿನಿವಾಸಪ್ರಸಾದ್ ಅಳಿಯ ಡಾ. ಎನ್.ಎಸ್. ಮೋಹನ್ ತಿಳಿಸಿದ್ದಾರೆ.

ಈ ಕುರಿತು ಸೋಮವಾರ ರಾತ್ರಿ  ಪತ್ರಿಕಾ ಹೇಳಿಕೆ ನೀಡಿರುವ , ಸಂಸದ ವಿ.ಶ್ರಿನಿವಾಸಪ್ರಸಾದ್ ಅಳಿಯ ಡಾ. ಎನ್.ಎಸ್. ಮೋಹನ್ ಅವರು, ಚಾ.ನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ನಾನು ಒಬ್ಬ ಪ್ರಮುಖನಾಗಿದ್ದೆ. ವರಿಷ್ಟರು ಎಲ್ಲವನ್ನು ಪರಿಗಣಿಸಿ, ಅಂತಿಮವಾಗಿ ಎಸ್. ಬಾಲರಾಜು ಅವರಿಗೆ ಅವಕಾಶ ನೀಡಿದ್ದಾರೆ. ಅವರಿಗೆ ಮೊದಲು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ನಾನು ಸಹ ಸಮಯವನ್ನು ಕೊಡುವ ಜೊತೆಗೆ ಕ್ಷೇತ್ರದಲ್ಲಿ ಮುಖಂಡರೊಂದಿಗೆ ಪ್ರವಾಸ ಮಾಡಿ, ದೇಶದ ಅಭಿವೃದ್ದಿಗಾಗಿ ಮೋದಿ ಬೇಕು ಎಂಬುದನ್ನು ಮತದಾರರಿಗೆ ತಿಳಿಸುವ ಮೂಲಕ ನಮ್ಮ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಮತ್ತೊಮ್ಮೆ ದೆಹಲಿಗೆ ಕಳುಹಿಸಬೇಕಾಗಿದೆ. ಇದಕ್ಕಾಗಿ ಸಾಮಾನ್ಯ ಕಾರ್ಯಕರ್ತನಂತೆ ದುಡಿಯುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ- ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿ‌ವೈ ವಿಜಯೇಂದ್ರ

ಕಳೆದ 7 ವರ್ಷಗಳಿಂದ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಘಟನೆ ಮಾಡುವ ಜೊತೆಗೆ ಆರೋಗ್ಯ ಶಿಬಿರಗಳು, ಸಾಮಾಜಿಕ ಸೇವಾ ಕಾರ್ಯಗಳು ಮಾಡಿಕೊಂಡು, ಕ್ಷೇತ್ರದಜನರಿಗೆ ಚಿರಪರಿಚತನಾಗಿದ್ದೆ. ಮುಂದೆಯು ಸಹ ನನ್ನ ಸೇವೆಯನ್ನು ಮುಂದುವರಿಸಿಕೊಂಡು ಹೋಗುವ ಜೊತೆಗೆ ಬಿಜೆಪಿ ಸದಸ್ಯನಾಗಿರುತ್ತೇನೆ. ಸರ್ಕಾರಿ ಹುದ್ದೆಯನ್ನು ತ್ಯಜಿಸಿ ರಾಜಕೀಯ ಪದಾರ್ಪಣೆ ಮಾಡಿದ್ದೇನೆ. 

ಬಿಜೆಪಿ ದೇಶದ ದೊಡ್ಡ ಪಕ್ಷ. ಅತಿ ದೊಡ್ಡ ಕಾರ್ಯಕರ್ತರ ಪಡೆಯನ್ನು ಹೊಂದಿದೆ. ರಾಷ್ಟ್ರೀಯ ವಿಚಾರಧಾರೆಗಳನ್ನು ಹೊಂದಿರುವ ಏಕೈಕ ಪಕ್ಷ. ವ್ಯಕ್ತಿಗಿಂತ ಪಕ್ಷದ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ. ಅಭಿವೃದ್ದಿಯ ಆಧಾರದಲ್ಲಿ ಚುನಾವಣೆ ನಡೆಯುತ್ತಿದೆ. ಹೀಗಾಗಿ ವೈಯಕ್ತಿಕ ಮನಸ್ತಾಪಗಳನ್ನು ಬದಿಗೊತ್ತಿ ಈ ಬಾರಿಯೂ ಬಿಜೆಪಿ ಗೆಲ್ಲಬೇಕು, ಮೋದಿ ಅವರ ಕೈ ಬಪಡಿಸಲು ಎಲ್ಲರು ದುಡಿಯೋಣ ಎಂದು ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ- ಚುನಾವಣಾ ಬಾಂಡ್‌ನಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: ಸಚಿವ ಎಂ.ಬಿ ಪಾಟೀಲ

ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವರನ್ನು ಭೇಟಿ ಮಾಡಿದ್ದರ ಪರಿಣಾಮ ಪಕ್ಷಾಂತರದ ಚರ್ಚೆ ಹುಟ್ಟಿತ್ತು.‌ ಈಗ ಊಹಾಪೋಹಗಳಿಗೆ ತೆರೆಬಿದ್ದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News