ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರುವ ವದಂತಿ ಕೆಲವು ದಿನಗಳಿಂದ ಹರಿದಾಡುತ್ತಿದ್ದವು ಆದರೆ ಅದು ಕನ್ಫರ್ಮ್ ಅನ್ನೋ ಸುಳಿವು ಸಿಕ್ಕಿದೆ. ಕಾರಣ ಸುಮಲತಾ ಬಿಜೆಪಿ ಸೇರ್ಪಡೆ ಆಗಲು, ಮದ್ದೂರು,ಮಂಡ್ಯ, ಶ್ರೀರಂಗಪಟ್ಟಣದಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ವಿತರಣೆ ಮಾಡಬೇಕು , ಹಾಗೂ 2024 ಕ್ಕೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ನನಗೆ ಟಿಕೆಟ್ ಕೊಡಬೇಕು ಎಂದು ಎರಡು ಷರತ್ತು ಇಟ್ಟಿದ್ದರು.
ಇದನ್ನೂ ಓದಿ: Siddaramaiah: ʼಬಿಜೆಪಿ ಮೇಲ್ಜಾತಿ ಮತ್ತು ಮೇಲ್ವರ್ಗದವರ ಪಕ್ಷʼ-ಮಾಜಿ ಸಿಎಂ ಸಿದ್ದರಾಮಯ್ಯ
ಇವರ ಬೇಡಿಕೆಗೆ ವರಿಷ್ಠರ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದ ರಾಜ್ಯ ನಾಯಕರು ತಿಳಿಸಿದ್ದರು. ಆದರೆ ಸದಾನಂದ ಗೌಡರಿಗೆ ಮುಂದಿನ ಲೋಕಸಭಾ ಚುನಾವಣೆಗೆ ಟಿಕೆಟ್ ಡೌಟ್ ಎಂಬ ವದಂತಿಯು ಸುಮಲತಾ ಅಂಬರೀಶ್ ಪಕ್ಷ ಸೇರ್ಪಡೆ ಖಚಿತ ಎಂಬುವುದು ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ: Janardhana Reddy: ನಾವು 30 ಕ್ಷೇತ್ರಗಳಲ್ಲಿ ಗೆಲುತ್ತೇವೆ : ಜನಾರ್ದನ ರೆಡ್ಡಿ
ಅಷ್ಟೇ ಅಲ್ಲದೇ,ಇಂದಿನ ಬಿಜೆಪಿ ವಿಜಯ್ ಸಂಕಲ್ಪ ಯಾತ್ರೆಯಲ್ಲಿ ಸುಮಲತಾ ಭಾವಚಿತ್ರ ಮದ್ದೂರಿನ ಬಿಜೆಪಿ ನಾಯಕರ ಫ್ಲೆಕ್ಸ್ನಲ್ಲಿ ರಾರಾಜಿಸ್ತದೆ.ಮದ್ದೂರು ನ ಬಿಜೆಪಿ ಮುಖಂಡ ಎಸ್ಪಿ ಸ್ವಾಮಿ ಭಾವಚಿತ್ರದ ಪೋಸ್ಟರ್ ಜೊತೆಗೆ ಸುಮಲತಾ ಭಾವಚಿತ್ರ ಕಂಡು ಬಂದಿದೆ. ಅಧಿಕೃತ ಸೇರ್ಪಡೆಗೂ ಮುನ್ನವೆ ಗ್ರೀನ್ ಸಿಗ್ನಲ್ ದೊರಕಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.