ಬೆಂಗಳೂರು : ಇತ್ತೀಚಿಗೆ ಬೆಂಗಳೂರು ಉಗ್ರರ ತಾಣವಾಗುತ್ತಿದೆ ಎನ್ನುವ ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವಾಗಿ ಈ ಹೇಳಿಕೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.


COMMERCIAL BREAK
SCROLL TO CONTINUE READING

ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ, ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು.


ತೇಜಸ್ವಿ ಸೂರ್ಯ ಒಬ್ಬ ಅಪ್ರಬುದ್ಧ ರಾಜಕಾರಣಿ: ಮಾಜಿ ಸಿಎಂ ಸಿದ್ದರಾಮಯ್ಯ


CAA ಮುಸ್ಲಿಂ ವಿರೋಧಿಯಲ್ಲ, ಆದರೆ ಇದರ ವಿರುದ್ಧದ ಪ್ರತಿಭಟನೆ ಹಿಂದೂ ವಿರೋಧಿ: MP ತೇಜಸ್ವಿ ಸೂರ್ಯ

ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ.  ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ! ಎಂದು ಲೇವಡಿ ಮಾಡಿದ್ದಾರೆ.