ಬೆಂಗಳೂರು : ನಗರದಲ್ಲಿ ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಇನ್ಸ್ಟಾಗ್ರಾಮ್ ನಲ್ಲಿ ದೋಸೆ ತಿನ್ನುತ್ತಿರುವ ವಿಡಿಯೋ ಪೋಸ್ಟ್ ಹಾಕಿದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಡಾವಣೆಗಳು ಜಲಾವೃತ, ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ : ಸಿಎಂ ಬೊಮ್ಮಾಯಿ


ಸಂಸದ ತೇಜಸ್ವಿ ಸೂರ್ಯ ವಿಡಿಯೋದಲ್ಲಿ , ಪದ್ಮನಾಭ ನಗರದ ಸಾತ್ವಿ ಕಿಚನ್‌ಗೆ ಬಂದಿದ್ದೆ. ಇನ್‌ಸ್ಟಾಗ್ರಾಂನಲ್ಲಿ ದೋಸೆಯ ಫೋಟೊ ನೋಡಿ ಟೆಪ್ಟ್‌ ಆಗಿ ಇಲ್ಲಿಗೆ ಬಂದಿದ್ದು. ತುಂಬಾ ಚೆನ್ನಾಗಿದೆ ಬೆಣ್ಣೆ ಮಸಾಲೆ. ನೀವೂ ಬನ್ನಿ. ತಿಂದಾಗ್ಲೇನೆ ಆಸ್ವಾದನೆ ನಿಮಗೆ ಗೊತ್ತಾಗುವುದು. ಉಪ್ಪಿಟ್ಟು ಬಹಳ ಚೆನ್ನಾಗಿದೆ. ಬನ್ನಿ' ಎಂದು ಜನರನ್ನು ಆಹ್ವಾನಿಸುತ್ತಿರುವುದು ಇದೆ, ಎಂದು ಹೇಳಿದ್ದನ್ನ ಜನರು ಪ್ರಶ್ನೆ ಮಾಡಿದರು.


 


ಅಯ್ಯೋ ದುರ್ವಿಧಿಯೇ: ಬಿಬಿಎಂಪಿ, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಯುವತಿ ಬಲಿ


ಇದನ್ನ ಹೊರೆತು ಪಡಿಸಿ ಸಾರ್ವಜನಿಕರು, ಪ್ರವಾಹ ಪರಿಸ್ಥಿತಿಯಲ್ಲಿ ಸಂಸದರು ಜವಾಬ್ದಾರಿಯಿಂದ ಜನರ ನೆರವಿಗೆ ಬರಬೇಕು ಎಂದು ಕಿವಿ ಮಾತನ್ನ ಹೇಳುವ ಜೊತೆಗೆ ಕೆಲವರು ಸಂಸದ ಸೂರ್ಯ ಅವರನ್ನ ಚೈಲ್ಡ್ ಚಪಾತಿ ಎಂದು ವ್ಯಂಗ್ಯ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.