ಬೆಂಗಳೂರು: ಪ್ರಸ್ತುತ ರಾಜ್ಯ ರಾಜಕೀಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪನವರೇ, ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಸಿದ್ದರಾಮಯ್ಯ...
ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರೇ, ನೀವು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು 3 ದಿನ, ಸಂಪುಟ ರಚನೆಗೆ 26 ದಿನ ಮತ್ತು ಖಾತೆ ಹಂಚಿಕೆಗೆ 6 ದಿನ ತೆಗೆದುಕೊಂಡಿರಿ. ಈಗ ಭಿನ್ನಮತ ಶಮನಕ್ಕೆ ಇನ್ನೆಷ್ಟು ದಿನ ಬೇಕು? ಈ ಎಲ್ಲದರ ನಡುವೆ ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ? ಎಂದು ಕಿಚಾಯಿಸಿದ್ದಾರೆ.
Mr @BSYBJP,
You took 3 days to take the oath,
26 days to have the council of ministers,
6 days to distribute portfolios.
How many more days you need to start the governance?
Then, why did you hurry to destabilize the coalition govt?#SelfOperatedKamala
— Siddaramaiah (@siddaramaiah) August 27, 2019
ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತುಗಳನ್ನು ಗಮನಿಸಿದರೆ ಜನಪ್ರತಿನಿಧಿಗಳ ದನಿ ಉಡುಗಿಹೋಗಿ ಸಂವಿಧಾನೇತರ ಶಕ್ತಿಗಳೇ ವಿಜೃಂಭಿಸಿರುತ್ತಿರುವ ಹಾಗೆ ಕಾಣಿಸುತ್ತಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ ಎಂದು ಸಿದ್ದರಾಮಯ್ಯ ಬಣ್ಣಿಸಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅವರ ರಾಜಕೀಯ ಎದುರಾಳಿಯಾದ ನನ್ನಂತಹವನಲ್ಲಿಯೂ ಅವರ ಬಗ್ಗೆ ಅನುಕಂಪ ಮೂಡುವಂತಾಗಿದೆ ಎಂದು ಸಿದ್ದು ಅನುಕಂಪ ವ್ಯಕ್ತಪಡಿಸಿದ್ದಾರೆ.