ಬೆಂಗಳೂರು: ಸರಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ಇಲ್ಲಿನ ಬಸವೇಶ್ವರ ನಗರದ ತಿಮ್ಮಯ್ಯ ರಸ್ತೆಯಲ್ಲಿ ಹೊಸದಾಗಿ ಆರಂಭಿಸಿರುವ ಸರ್ಕಾರಿ ಪ್ರೀಮಿಯಂ ಮದ್ಯ ಮಾರಾಟ ಮಳಿಗೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ನೂತನ ವರ್ಷಾರಂಭದ ದಿನವಾದ ಸೋಮವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಮಧ್ಯಮ ವರ್ಗದಿಂದ ಹಿಡಿದು ಸಮಾಜದ ಪ್ರತಿಯೊಂದು ವರ್ಗದ ಗ್ರಾಹಕರನ್ನೂ ಸೆಳೆಯುವುದು ಎಂಎಸ್ಐಎಲ್ ನ ಗುರಿಯಾಗಿದೆ. ಇದರಂತೆ, ಹೊಸ ರೂಪ ಪಡೆದಿರುವ ಈ ಬೋಟಿಕ್ ನಲ್ಲಿ ಸಾಮಾನ್ಯ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ಬ್ರಾಂಡೆಡ್ ಮದ್ಯದ ಉತ್ಪನ್ನಗಳು ಸುಲಭವಾಗಿ ಸಿಗಲಿದೆ. ಚಿತ್ತಾಕರ್ಷಕ ಒಳಾಂಗಣ ವಿನ್ಯಾಸ ಮತ್ತು ಗ್ರಾಹಕರಿಗೆ ಹಿತಕರ ಅನುಭವ ಸಿಗುವಂತೆ ಮಾಡಲು ಇಲ್ಲಿ ಆದ್ಯತೆ ಕೊಡಲಾಗಿದ್ದು, ಜಾಗತಿಕ ಗುಣಮಟ್ಟದ ಮಾಲ್ ರೀತಿಯಲ್ಲಿ ಈ ಪ್ರೀಮಿಯಂ ಬೋಟಿಕ್ ಇದೆ” ಎಂದರು.
ಇದನ್ನೂ ಓದಿ : ಕಪ್ಪು ಶಾಲು ಹಾಕಿಕೊಂಡು ಪ್ರತಿಭಟನೆ ಮಾಡಲು ನಿರ್ಧಾರ
ಎಂಎಸ್ಐಎಲ್ ಅಧ್ಯಕ್ಷರೂ ಆದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಸಲಹೆ ಮೇರೆಗೆ ಹಾಲಿ ಇರುವ ಮದ್ಯ ಮಾರಾಟ ಮಳಿಗೆಗಳನ್ನು ಹೈಟೆಕ್ ರೀತಿಯಲ್ಲಿ ವಿನ್ಯಾಸ ಮಾಡಲು ಆರಂಭಿಸಿದ್ದು ಹಂತಹಂತವಾಗಿ ಎಲ್ಲವನ್ನೂ ಬದಲಿಸಲಾಗುವುದು ಎಂದರು.
ಎಂಎಸ್ಐಎಲ್ ರಾಜ್ಯದಲ್ಲಿ ಒಟ್ಟು 1,029 ಮದ್ಯ ಮಾರಾಟ ಮಳಿಗೆಗಳನ್ನು ನಡೆಸುತ್ತಿದೆ. ಈ ಪೈಕಿ 200 ಮಳಿಗೆಗಳನ್ನು ಬೋಟಿಕ್ ಆಗಿ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಇದರಲ್ಲಿ 20 ಮಳಿಗೆಗಳು ಬೆಂಗಳೂರಿನಲ್ಲೇ ಇರಲಿವೆ. ಇನ್ನು ಕೆಲವೇ ದಿನಗಳಲ್ಲಿ ಡಾ.ರಾಜಕುಮಾರ್ ರಸ್ತೆ, ಆರ್ ಪಿಸಿ ಬಡಾವಣೆ ಮತ್ತು ವಿಜಯನಗರದಲ್ಲಿ ಇಂತಹ ಬೋಟಿಕ್ ಮದ್ಯಪ್ರಿಯರಿಗೆ ಮುಕ್ತವಾಗಲಿವೆ ಎಂದು ಅವರು ಹೇಳಿದರು.
ಇದಲ್ಲದೆ ಶಿವಾನಂದ ವೃತ್ತ, ವರ್ತೂರು, ಕೆಂಗೇರಿ ಉಪನಗರ, ಮಾರುತಿ ಸೇವಾ ನಗರ, ಹನುಮಂತ ನಗರ ಮತ್ತು ಸರ್ಜಾಪುರ ರಸ್ತೆಯಲ್ಲಿರುವ ದೊಡ್ಡಕನ್ನಹಳ್ಳಿಯಲ್ಲಿ ಇರುವ ಎಂಎಸ್ಐಎಲ್ ಮಳಿಗೆಗಳನ್ನು ಬೋಟಿಕ್ ಗಳಾಗಿ ರೂಪಾಂತರಿಸುವ ಕೆಲಸ ಪ್ರಗತಿಯಲ್ಲಿದೆ. ಈ ಎಲ್ಲ ಮಳಿಗೆಗಳಲ್ಲೂ ಚಿಲ್ಲರೆ ಮಾರಾಟ ದರದಲ್ಲಿ ಅತ್ಯುತ್ಕೃಷ್ಟ ಮದ್ಯಗಳು ಲಭ್ಯವಾಗಲಿವೆ ಎಂದು ಅವರು ನುಡಿದರು.
ಇದನ್ನೂ ಓದಿ : ನೀವೂ 2023 ರಲ್ಲಿ ಪದವೀಧರರಾಗಿದ್ದು, ಉದ್ಯೋಗದ ಹುಡುಕಾಟ ನಡೆಸುತ್ತಿದ್ದೀರಾ?
ಎಂಎಸ್ಐಎಲ್ ರಾಜ್ಯದಲ್ಲಿರುವ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇಂತಹ ತಲಾ 2 ಬೋಟಿಕ್ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಇಂತಹ ಬೋಟಿಕ್ ತೆರೆಯಲಿದೆ. ಇವೆಲ್ಲವೂ ಇನ್ನು ಮೂರ್ನಾಲ್ಕು ತಿಂಗಳುಗಳಲ್ಲಿ ಹಂತಹಂತವಾಗಿ ಆರಂಭವಾಗಲಿವೆ. ಮದ್ಯಪ್ರಿಯರು ಯಾವುದೇ ತೊಂದರೆ ಇಲ್ಲದೆ, ತಮಗೆ ಬೇಕಾದ ದರ್ಜೆಯ ಮದ್ಯದ ಉತ್ಪನ್ನಗಳನ್ನು ಇಲ್ಲಿ ಖರೀದಿಸಬಹುದು ಎಂದು ಮನೋಜ್ ಕುಮಾರ್ ಮಾಹಿತಿ ನೀಡಿದರು.
ಇಂತಹ ಬೋಟಿಕ್ ಗಳಿಂದ ಸಂಸ್ಥೆಯ ವಹಿವಾಟು ಶೇಕಡ 30ರಿಂದ 40ರಷ್ಟು ಏರಿಕೆಯಾಗಲಿದೆ. ಇಲ್ಲಿ ಸಿಗುವ ಬ್ರಾಂಡೆಡ್ ಮದ್ಯದ ಬಗೆಗಳಿಗೆ ಗುಣಮಟ್ಟದ ಖಾತ್ರಿ ಇರಲಿದೆ. ಈ ಮೂಲಕ ಸಂಸ್ಥೆಯು ಹೊಸ ಹೆಜ್ಜೆ ಇಡುತ್ತಿದೆ. ಸಂಸ್ಥೆಯು ವಹಿವಾಟನ್ನು 4 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ವಾರ್ಷಿಕ 10 ಸಾವಿರ ಕೋಟಿ ರೂ. ಮೊತ್ತದ ಚಿಟ್ ಫಂಡ್ ವ್ಯವಹಾರ, ಲೇಖನ ಸಾಮಗ್ರಿಗಳ ಮಾರಾಟಕ್ಕೆ ಫ್ರಾಂಚೈಸಿಗಳ ಆರಂಭ, 10 ಮೆಗಾ ಮೆಡಿಕಲ್ ಶಾಪ್ ಆರಂಭ ಮುಂತಾದ ಉಪಕ್ರಮಗಳನ್ನು ಕೈಗೊಳ್ಳಲಿದೆ. ಜೊತೆಗೆ ಪ್ರತಿಯೊಂದು ವಹಿವಾಟಿನಲ್ಲೂ ಕಾರ್ಪೊರೇಟ್ ಸ್ಪರ್ಶ ನೀಡಲಾಗುವುದು ಎಂದು ಅವರು ವಿವರಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.