Muda Scam: ಮುಡಾ ಪ್ರಕರಣದ ಬಗ್ಗೆ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ತೀರ್ಪಿನ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. 


COMMERCIAL BREAK
SCROLL TO CONTINUE READING

ಸಿಎಂ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆಯ ಸಂಪೂರ್ಣ ಡೀಟೈಲ್ ಈ ಕೆಳಕಂಡಂತಿದೆ:- 
-ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.


-ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.  ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. 


-ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು. 


ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.  


ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.


-ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. 


-ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ.  ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. 


- ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ.


- ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. 


-ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ


- ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.


-ನನ್ನ ೪೦ ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.


- ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.


- ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ.


- ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.


- ಇದೇ ಬಿಜೆಪಿ, ಜೆಡಿಎಸ್  ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.


 -ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.


-ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.


-ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು.


-ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು  ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ.


-ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. 


-ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್  ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ವಿಶ್ವಾಸದಿಂದ ನುಡಿದಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.