ತನಿಖೆಗೆ ಹೆದರಲ್ಲ; ತನಿಖೆಯನ್ನು ಎದುರಿಸಲು ಸಿದ್ಧ, ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಹೆಸರು ತಳುಕುಹಾಕಿಕೊಂಡಿರುವ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿದೆ. 

Written by - Yashaswini V | Last Updated : Sep 25, 2024, 03:30 PM IST
  • ನಿನ್ನೆಯೂ ಕೂಡ ಮಾತುಗಳನ್ನು ಹೇಳಿದ್ದು ಈಗಲೂ ಅದನ್ನೇ ಪುನರುಚ್ಚರಿಸುತ್ತಿದ್ದೇನೆ.
  • ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸ್ಸು ಮಾಡಲಾಗಿದೆ.
  • ತನಿಖೆಯನ್ನು ಎದುರಿಸಲು ಸಿದ್ದ, ಕಾನೂನು ಹೋರಾಟಕ್ಕೂ ಸಿದ್ದ: ಸಿಎಂ ಸಿದ್ದರಾಮಯ್ಯ
ತನಿಖೆಗೆ  ಹೆದರಲ್ಲ; ತನಿಖೆಯನ್ನು ಎದುರಿಸಲು ಸಿದ್ಧ, ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಸಿಎಂ ಸಿದ್ದರಾಮಯ್ಯ

ಬೆಂಗಳೂರು:   ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Add Zee News as a Preferred Source

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ  ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನ ಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ ನೀಡಿದಂತೆ 17 ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ.ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ ಎಂದರು.

ಇದನ್ನೂ ಓದಿ- MUDA Scam: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿ ತನಿಖೆಗೆ ಆದೇಶ!

ಮೈಸೂರಿಗೆ ಲೋಕಾಯುಕ್ತಕ್ಕೆ  ಶಿಫಾರಸ್ಸು!
“ನಿನ್ನೆಯೂ ಕೂಡ  ಮಾತುಗಳನ್ನು ಹೇಳಿದ್ದು ಈಗಲೂ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸ್ಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮೂಡಾ ಕೂಡ ಅಲ್ಲಿಯೇ ಇರುವುದರಿಂದ  ಮೈಸೂರಿಗೆ ಶಿಫಾರಸ್ಸು ಮಾಡಿರಬೇಕು  ಎಂದು ಭಾವಿಸಿದ್ದೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಇದನ್ನೂ ಓದಿ- MUDA Scam: ಏನಾಗಲಿದೆ ಸಿಎಂ ಸಿದ್ದರಾಮಯ್ಯರ ರಾಜಕೀಯ ಭವಿಷ್ಯ..?

ಪಿ.ಎನ್.ದೇಸಾಯಿಯವರ ಆಯೋಗದ ತನಿಖೆ  ಮುಂದುವರೆಯಲಿದೆ: 
ಇಂದಿನ ಪೂರ್ಣ ಆದೇಶ ಸಿಕ್ಕಿದ ಮೇಲೆ ವಕೀಲರೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು. ಮೂಡಾ ಪ್ರಕರಣದ ತನಿಖೆಗೆ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾ.ಪಿ.ಎನ್.ದೇಸಾಯಿಯವರ ಆಯೋಗ  ಅದರ  ತನಿಖೆ  ಮುಂದುವರೆಯುತ್ತದೆಯೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ  ನ್ಯಾಯಾಂಗ ತನಿಖೆ ಮುಂದುವರೆಯುತ್ತದೆ ಎಂದರು.  ಸಂಪೂರ್ಣ ಪ್ರತಿಕ್ರಿಯೆ ನೀಡಲು ನಾನು ಪೂರ್ಣ ಆದೇಶ ಓದಿದ ಮೇಲೆ ನಾಳೆ ಬೆಳಿಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News