MUDA Scam: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿ ತನಿಖೆಗೆ ಆದೇಶ!
MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್ಗೆ ನೀಡಿದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಮಂಗಳವಾರ ವಜಾಗೊಳಿಸಿತ್ತು.
MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ ಎದುರಾಗಿದೆ. ಮುಡಾ ಹಗರಣ ಪ್ರಕರಣ ಸಂಬಂಧ ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ನಡೆದಿದೆ. ಮಂಗಳವಾರ ಹೈಕೋರ್ಟ್ ನೀಡಿರುವ ತೀರ್ಪು ಪರಿಗಣಿಸಿ ಖಾಸಗಿ ದೂರಿನ ಮೇರೆಗೆ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಆದೇಶವನ್ನು ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ. ಮುಡಾ ಹಗರಣದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿ ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯವು ತೀರ್ಪು ನೀಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನೆಡೆಯಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು. ರಾಜ್ಯಪಾಲರ ಕ್ರಮವನ್ನು ಸಿದ್ದರಾಮಯ್ಯನವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಇದರಿಂದ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಜಡ್ಜ್ ಆದೇಶಲ್ಲಿ ಉಲ್ಲೇಖಿಸಿರುವ ಪ್ರಮುಖ ಅಂಶಗಳು
>> ಮುಡಾ ಜಮೀನಿನಲ್ಲಿ ಸೈಟ್ ಹಂಚಿಕೆ ಮಾಡಿತ್ತು
>> ಮುಡಾ ಸೈಟ್ ಹಂಚಿಕೆಯಾದ ಬಳಿಕವೂ ಖರೀದಿ
>> ಸಿಎಂ ಭಾಮೈದುನ ಮಲ್ಲಿಕಾರ್ಜುನಸ್ವಾಮಿ ಜಮೀನು ಖರೀದಿ ಬಗ್ಗೆ ಉಲ್ಲೇಖ
>> ಜಮೀನು ಸ್ವಾಧೀನಪಡಿಸಿಕೊಂಡು ಪರಿಹಾರವನ್ನು ನೀಡಲಾಗಿತ್ತು
>> ಪರಿಹಾರ ನಿಗದಿಯಾದ ಬಳಿಕವೂ ಡಿ-ನೋಟಿಫಿಕೇಷನ್ ಮಾಡಲಾಗಿದೆ
>> ಭೂ ಪರಿವರ್ತನೆ, ಸೈಟ್ ಹಂಚಿಕೆ ಬಗ್ಗೆ ಆದೇಶದಲ್ಲಿ ಉಲ್ಲೇಖ
>> ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯರ ಪಾತ್ರದ ಬಗ್ಗೆ ನ್ಯಾಯಮೂರ್ತಿಗಳು ಉಲ್ಲೇಖಿಸಿದ್ದಾರೆ
>> ದೇವರಾಜು ಹೆಸರಿಗೆ ಜಮೀನಿನ ನಕಲಿ ಡಿ-ನೋಟಿಫೀಕೇಷನ್ ಆಗಿದೆ
>> PC ಕಾಯ್ದೆ 7C ಅಡಿ ತನಿಖೆಯ ಅಗತ್ಯತೆ ಕಾಣುತ್ತಿದೆ
>> ದೇವರಾಜು ಜಮೀನಿನ ಮಾಲೀಕ ಅಲ್ಲ, ಆದರೂ ದೇವರಾಜುವಿನಿಂದ ಖರೀದಿ ಮಾಡಲಾಗಿದೆ
>> ರಾಜ್ಯಪಾಲರ ಅನುಮತಿಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು
>> ಸಿಎಂ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ
>> ಹೈಕೋರ್ಟ್ ಆದೇಶ ಪ್ರತಿಯನ್ನು ದೂರುದಾರರು ಸಲ್ಲಿಸಿದ್ದಾರೆ
>> ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳು ಹಿಂಜರಿಯಬಾರದು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.