Siddaramaiah wife Parvathi: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.

Siddaramaiah wife Parvathi: ಮುಡಾ ಹಗರಣ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ED) ನೀಡಿದ್ದ ಸಮನ್ಸ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಸುಪ್ರೀಂಕೋರ್ಟ್ ಭಾರೀ ರಿಲೀಫ್ ನೀಡಿದೆ.
ED ನೀಡಿದ್ದ ನೋಟಿಸ್ಗಳನ್ನು ಕರ್ನಾಟಕ ಹೈಕೋರ್ಟ್ ಈಗಾಗಲೇ ರದ್ದುಗೊಳಿಸಿದ್ದರೂ, ಈ ತೀರ್ಪು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಚೀಫ್ ಜಸ್ಟೀಸ್ ಬಿ.ಆರ್. ಗವಾಯಿ ನೇತೃತ್ವದ ಪೀಠ, ED ಅರ್ಜಿಯನ್ನು ತಿರಸ್ಕರಿಸಿದೆ.
ಅದರಲ್ಲೂ ಹೆಚ್ಚು, EDನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದನ್ನು ಸುಪ್ರೀಂಕೋರ್ಟ್ ತೀವ್ರವಾಗಿ ಖಂಡಿಸಿದೆ. "ರಾಜಕೀಯ ಪೈಪೋಟಿ ಏನೇ ಇರಲಿ, ಮತದಾರರ ಮುಂದೆಯೇ ನಡೆಸಿಕೊಳ್ಳಲಿ. ಕೇಂದ್ರ ಸಂಸ್ಥೆಗಳನ್ನು ಅದೆಲ್ಲದರಿಗಾಗಿ ಬಳಸಬೇಡಿ," ಎಂದು ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದ್ದಾರೆ. ಹೈಕೋರ್ಟ್ ತೀರ್ಪಿನಲ್ಲಿ ಯಾವುದೇ ಲೋಪವಿಲ್ಲ ಎಂದು ದೃಢಪಡಿಸಿರುವ ಸುಪ್ರೀಂ, EDಗೆ ಝಟ್ಕಾ ನೀಡಿದೆ.
ಈ ತೀರ್ಪಿನಿಂದ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ತಾತ್ಕಾಲಿಕವಾಗಿ ನಿರಾಳರಾಗಿದ್ದಾರೆ.