Muda Scam: ಸಿದ್ದರಾಮಯ್ಯಗೆ ಟೆನ್ಶನ್ ಟೆನ್ಶನ್! ಹೈಕೋರ್ಟ್‌ನಲ್ಲಿ ಮುಡಾ ಪ್ರಕರಣದ ತೀರ್ಪು

ಸಿಎಂ ಸಿದ್ದರಾಮಯ್ಯನವರ ಪಾಲಿಗೆ ನಾಳೆ ಮಹತ್ವದ ದಿನ ಆಗಲಿದೆ. ನಾಳೆ(ಸೆ.೨೪)ಯೇ ಮುಡಾ ಪ್ರಕರಣದ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಮಧ್ಯಾಹ್ನ 12 ಗಂಟೆಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದ್ದಾರೆ. ಸಿದ್ದರಾಮಯ್ಯರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್‌ ನಾಳೆ ತೀರ್ಪು ಪ್ರಕಟಿಸಲಿದೆ.

Written by - Puttaraj K Alur | Last Updated : Sep 24, 2024, 12:22 PM IST
  • ಸಿಎಂ ಸಿದ್ದರಾಮಯ್ಯನವರ ಪಾಲಿಗೆ ನಾಳೆ ಮಹತ್ವದ ದಿನ ಆಗಲಿದೆ
  • ನಾಳೆ ಮುಡಾ ಪ್ರಕರಣದ ಬಗ್ಗೆ ಮಹತ್ವದ ತೀರ್ಪು ಹೊರಬೀಳಲಿದೆ
  • ರಾಜ್ಯಪಾಲರ ನಿರ್ಧಾರ ಎತ್ತಿ ಹಿಡಿದರೆ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ
Muda Scam: ಸಿದ್ದರಾಮಯ್ಯಗೆ ಟೆನ್ಶನ್ ಟೆನ್ಶನ್! ಹೈಕೋರ್ಟ್‌ನಲ್ಲಿ ಮುಡಾ ಪ್ರಕರಣದ ತೀರ್ಪು   title=
ಸಿದ್ದರಾಮಯ್ಯಗೆ ಟೆನ್ಶನ್ ಟೆನ್ಶನ್!

Judgment of Muda case: ಸಿಎಂ ಸಿದ್ದರಾಮಯ್ಯನವರ ಪಾಲಿಗೆ ನಾಳೆ ಮಹತ್ವದ ದಿನ ಆಗಲಿದೆ. ನಾಳೆ(ಸೆ.೨೪)ಯೇ ಮುಡಾ ಪ್ರಕರಣದ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಮಧ್ಯಾಹ್ನ 12 ಗಂಟೆಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದ್ದಾರೆ. ಸಿದ್ದರಾಮಯ್ಯರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್‌ ನಾಳೆ ತೀರ್ಪು ಪ್ರಕಟಿಸಲಿದೆ.

ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನರ ಏಕಸದಸ್ಯ ಪೀಠ ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಸಿದ್ದರಾಮಯ್ಯರ ಪರವಾಗಿ ಹಿರಿಯ ಸುಪ್ರೀಂಕೋರ್ಟ್‌ ವಕೀಲ ಅಭಿಷೇಕ್‌ ಮನು ಸಿಂಘ್ವಿ ಸೇರಿದಂತೆ ಹಲವರು ವಾದ ಮಂಡಿಸಿದ್ದರು. ಒಂದು ವೇಳೆ ಹೈಕೋರ್ಟ್ ಸಿಎಂ ಸಿದ್ದರಾಮಯ್ಯರ ಅರ್ಜಿಯನ್ನು ಮನ್ನಿಸಿದರೆ ಇದು ಅವರಿಗೆ ಅತೀದೊಡ್ಡ ಜಯ ಸಿಗಲಿದೆ. ಆದರೆ ಪ್ರಾಸಿಕ್ಯೂನ್‌​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದರೆ ಸಿದ್ದರಾಮಯ್ಯರಿಗೆ ಬಹುದೊಡ್ಡ ಸಂಕಷ್ಟ ಎದುರಾಗಲಿದೆ.

ಇದನ್ನೂ ಓದಿ: ಜೀ ಕನ್ನಡ ನ್ಯೂಸ್‌ ಇಂದಿನ ಪ್ರಮುಖ ಸುದ್ದಿಗಳು

ಸಿದ್ದರಾಮಯ್ಯರ ಪರ ಆದೇಶ ಬಂದರೆ ಮುಂದೇನು?

ಒಂದು ವೇಳೆ ಸಿಎಂ ಸಿದ್ದರಾಮಯ್ಯರ ಪರ ಆದೇಶ ಬಂದರೆ ಅವರು ಬೀಸುವ ದೊಣ್ಣೆಯಿಂದ ಪಾರಾಗಬಹುದು. ಈ ಪ್ರಾಸಿಕ್ಯೂಷನ್​ನಿಂದ ಬಹಳಷ್ಟು ಕುಗ್ಗಿಹೋಗಿರುವ ಸಿದ್ದರಾಮಯ್ಯರಿಗೆ ಆನೆ ಬಲ ಬಂದಂತಾಗುತ್ತದೆ. ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ್ದ ರಾಜ್ಯಪಾಲರಿಗೆ ಹಿನ್ನಡೆಯಾಗುತ್ತದೆ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ನೈತಿಕ ಶಕ್ತಿ ಬರಲಿದೆ. ಇದರಿಂದ ಸಚಿವರು, ಶಾಸಕರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲೂ ಆತ್ಮವಿಶ್ವಾಸವು ಹೆಚ್ಚಾಗಲಿದೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಮತ್ತಷ್ಟು ಬಲಿಷ್ಠರಾಗುತ್ತಾರೆ. ಸಿಎಂ ಹಾಗೂ ಸರ್ಕಾರದ ವಿರುದ್ದ ಹೋರಾಟ ನಡೆಸುತ್ತಿದ್ದ ಬಿಜೆಪಿಗೆ ತಿರುಗೇಟು ನೀಡಲು ಅವಕಾಶ ದೊರೆಯಲಿದೆ. ಇಡೀ ದೇಶಕ್ಕೆ ಬಿಜೆಪಿ ವಿರುದ್ದ ಕಾಂಗ್ರೆಸ್ ಸಂದೇಶ ಹೊರಡಿಸಿದಂತಾಗುತ್ತದೆ.

ಹೈಕೋರ್ಟ್​ ರಾಜ್ಯಪಾಲರ ಆದೇಶ ಎತ್ತಿ ಹಿಡಿದರೆ?

ಒಂದು ವೇಳೆ ರಾಜ್ಯಪಾಲರ ನಿರ್ಧಾರದ ಪರ ಆದೇಶ ಬಂದರೆ ಪ್ರಕರಣದ ತನಿಖೆಗೆ ಆದೇಶ ದೊರೆಯಲಿದೆ. ತನಿಖೆಗೆ ಆದೇಶ ನೀಡಿದರೆ ತಕ್ಷಣವೇ ಸಿಎಂ‌ ವಿರುದ್ದ ಎಫ್​ಐಆರ್ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಸಾಧ್ಯತೆ ಇದೆ. ರಾಜೀನಾಮೆ ನೀಡದೆ ಮತ್ತೆ ಕಾನೂನು ಹೋರಾಟ ಮುಂದುವರಿಸುವ ಆಯ್ಕೆಯೂ ಅವರ ಮುಂದಿರುತ್ತದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಬಹುದು. ರಾಜ್ಯಪಾಲರ ವಿರುದ್ಧ ಮತ್ತೆ ಕಾನೂನು ಜೊತೆ ರಾಜಕೀಯ ಸಮರ ಏರ್ಪಡಬಹುದು. ಕಾಂಗ್ರೆಸ್‌ ಪಕ್ಷದ ವತಿಯಿಂದ ರಾಜ್ಯದಾದ್ಯಂತ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ ನೀಡಬಹುದು. ಕಾಂಗ್ರೆಸ್ ಈ ವಿಷಯವನ್ನು ರಾಷ್ಟ್ರ ಮಟ್ಟದಲ್ಲಿ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಹೋರಾಟ ಮಾಡಬಹುದು.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಜೆಪಿ ಶಾಸಕ ಮುನಿರತ್ನ ಕಣ್ಣೀರು!

ಏನಿದು ವಿವಾದ?

ಸಿದ್ದರಾಮಯ್ಯರ ಪತ್ನಿ ಪಾರ್ವತಿಯವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ನೀಡಿದ್ದರು. ಇದು ಒಟ್ಟು 1,48,104 ಚದರಡಿ ಇತ್ತು. ಇದರ ಬದಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 38,284 ಚದರಡಿ ಜಾಗ ನೀಡಿರುವುದೇ ಈ ವಿವಾದದ ಕೇಂದ್ರಬಿಂದುವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News