MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ವಜಾಗೊಳಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯನವರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. 


COMMERCIAL BREAK
SCROLL TO CONTINUE READING

ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯನವರು ಕೂಡಲೇ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಬಿಜೆಪಿ ನಾಯಕರು ಸಹ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯರ ರಿಟ್‌ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದರಿಂದ ಬಿಜೆಪಿಗೆ ಆನೆಬಲ ಬಂದಂತಾಗಿದೆ. 


ಇದನ್ನೂ ಓದಿ: Muda Scam: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ; ಮುಡಾ ಪ್ರಕರಣದಲ್ಲಿ ʼಸಿದ್ದುʼಗೆ ಬಿಗ್‌ ಶಾಕ್!


ಇನ್ನು ತಮ್ಮ ವಿರುದ್ಧ ಬಂದ ತೀರ್ಪಿನ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ʼನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಡಿ ಇಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ನನ್ನ ವಿರುದ್ಧ ವ್ಯವಸ್ಥಿ ರಾಜಕೀಯ ಸಂಚು ರೂಪಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದೆ. ಹೀಗಾಗಿ ನಾನು ಯಾವುದೇ ರೀತಿ ಧೈರ್ಯ ಕಳೆದುಕೊಳ್ಳುವುದಿಲ್ಲವೆಂದು ಸಿದ್ದರಾಮಯ್ಯನವರು ಹೇಳಿದ್ದಾರೆ. 


ಏನಾಗಲಿದೆ ಸಿದ್ದರಾಮಯ್ಯರ ರಾಜಕೀಯ ಭವಿಷ್ಯ?


ಮುಡಾ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಇದು ಸಿದ್ದರಾಮಯ್ಯನವರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಹೈಕೋರ್ಟ್​ ರಾಜ್ಯಪಾಲರ ಆದೇಶ ಎತ್ತಿ ಹಿಡಿದಿರುವುದರಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ಧ FIR ದಾಖಲಾಗುವ ಸಾಧ್ಯತೆ ಇದ್ದು, ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಬಹುದು. ರಾಜೀನಾಮೆ ನೀಡದೆ ಮತ್ತೆ ಕಾನೂನು ಹೋರಾಟ ಮುಂದುವರಿಸುವ ಆಯ್ಕೆಯೂ ಸಿದ್ದರಾಮಯ್ಯನವರ ಮುಂದಿದೆ. 


ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಜೆಪಿ ಶಾಸಕ ಮುನಿರತ್ನ ಕಣ್ಣೀರು!


ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಸುಪ್ರೀಂಕೋರ್ಟ್ ಮೊರೆ ಹೋಗಬಹುದು. ರಾಜ್ಯಪಾಲರ ವಿರುದ್ಧ ಮತ್ತೆ ಕಾನೂನು ಜೊತೆ ರಾಜಕೀಯ ಸಮರ ಏರ್ಪಡಬಹುದು. ಕಾಂಗ್ರೆಸ್‌ ಪಕ್ಷದ ವತಿಯಿಂದ ರಾಜ್ಯದಾದ್ಯಂತ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ ನೀಡಬಹುದು. ಕಾಂಗ್ರೆಸ್ ಈ ವಿಷಯವನ್ನು ರಾಷ್ಟ್ರಮಟ್ಟದಲ್ಲಿ ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಹೋರಾಟ ಮಾಡಬಹುದು. ಈಗಾಗಲೇ ಸಿದ್ದರಾಮಯ್ಯನವರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.