ಹೈಕೋರ್ಟ್‌ ನಿರ್ದೇಶನದ ಮೇರೆಗೆ ಚಿತ್ರದುರ್ಗ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಕೆ.ಬಿ.ಗೀತಾ ಅವರು ಪೀಠಾಧಿಪತಿ ಶಿವಮೂರ್ತಿ ಶರಣರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. 


COMMERCIAL BREAK
SCROLL TO CONTINUE READING

ನ್ಯಾಯಾಲಯವು ಮುರುಘಾ ಶರಣರಿಗೆ ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿರುವುದರಿಂದ ಶರಣರು ಜಿಲ್ಲೆಯಿಂದ ಹೊರಗಿನಿಂದಲೇ ಆಡಳಿತ ನಡೆಸಲಿದ್ದಾರೆ. ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತವನ್ನು ನ್ಯಾಯಾಧೀಶರು ಪೀಠಾಧಿಪತಿಗೆ ಹಸ್ತಾಂತರಿಸಿದ್ದು  ಮಠದ ಸದ್ಭಕ್ತರು ಸಹಕರಿಸಬೇಕು ಎಂದು ಎಸ್‌ಜೆಎಂ ವಿದ್ಯಾ‍ಪೀಠದ ಅಧ್ಯಕ್ಷರೂ ಆಗಿರುವ ಶಿವಮೂರ್ತಿ ಶರಣರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ.
 
ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಪೋಕ್ಸೊ  ಪ್ರಕರಣದಲ್ಲಿ 2022ರ ಸೆ.1ರಂದು ಬಂಧಿತರಾಗಿದ್ದರು. ಈ ಹಿನ್ನಲೆಯಲ್ಲಿ ಕ್ರಮ ಕೈಗೊಂಡಿದ್ದ ರಾಜ್ಯ ಸರ್ಕಾರ, 2022ರ ಡಿಸೆಂಬರ್ 13ರಂದು ಮಠದ ಸುಗಮ ಆಡಳಿತಕ್ಕಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ  ಆದೇಶಿಸಿತ್ತು. 


ಇದನ್ನೂ ಓದಿ- ಬಳ್ಳಾರಿಯಲ್ಲಿ ವೈದ್ಯಕೀಯ ಪದವಿ ಪಡೆಯದ ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ದಾಳಿ ಮತ್ತು ಜಪ್ತಿ


ಆ ಸಮಯದಲ್ಲಿ ಮಠದ ಉಸ್ತುವಾರಿಯಾಗಿದ್ದ ಬಸವಪ್ರಭು ಸ್ವಾಮೀಜಿ ಅವರು ಸರ್ಕಾರದ ಈ ಕ್ರಮವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ವಿಚಾರಣೆ ಬಳಿಕ ಸರ್ಕಾರದ ಆಡಳಿತಾಧಿಕಾರಿ ನೇಮಕ ಆದೇಶವನ್ನು ರದ್ದುಪಡಿಸಿದ ನ್ಯಾಯಾಲಯವು,  ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನಿಯೋಜಿಸಿ ಜುಲೈ 3ರಂದು ಆದೇಶಿಸಿತ್ತು. 


ಶಿವಮೂರ್ತಿ ಶರಣರು ನ.16ರಂದು ಜಾಮೀನು ಮೇಲೆ ಕಾರಾಗೃಹದಿಂದ ಹೊರಬಂದ ಬಳಿಕ ಈ ಆದೇಶ ರದ್ದಾಗಿತ್ತು. ಪೀಠಾಧಿಪತಿಗೆ ಅಧಿಕಾರ ಮರಳಿಸಿದ ಆದೇಶ ಡಿ.5ರಂದು ಹೊರಬಿದ್ದಿದ್ದು, ನ್ಯಾಯಾಧೀಶರ ಕಚೇರಿ ಇದೀಗ ಅಧಿಕೃತ ಪತ್ರವನ್ನು ಮಠಕ್ಕೆ ತಲುಪಿಸಿದೆ. ಬಸವಪ್ರಭು ಸ್ವಾಮೀಜಿ ನ್ಯಾಯಾಲಯದ ಆದೇಶ ಪ್ರತಿ ಸ್ವೀಕರಿಸಿ ಶಿವಮೂರ್ತಿ ಮುರುಘಾ ಶರಣರಿಗೆ ತಲುಪಿಸಿದ್ದಾರೆ. 


ಇದೀಗ  ಆಡಳಿತಾಧಿಕಾರಿ ರದ್ದಾಗಿದ್ದು  ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಅಧಿಕಾರ ಬಂದಿದೆ. ಆದಾಗ್ಯೂ, ಮುರುಘಾ ಶರಣರಿಗೆ ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಶರಣರು ಹೊರಗಿನಿಂದಲೇ ಆಡಳಿತ ನಡೆಸಲಿದ್ದಾರೆ ಎನ್ನಲಾಗಿದೆ. 


ಇದನ್ನೂ ಓದಿ- ಬಿಜೆಪಿಯವರು ಬಚ್ಚಲಿನಲ್ಲಿ ಕಾಲು ಜಾರಿ ಬಿದ್ದರೂ ಕಾಂಗ್ರೆಸ್ ಕಾರಣ ಎನ್ನುತ್ತಾರೆ!


ಜೂನ್ 13 ರಂದು ಮುರುಘಾ ಮಠದ ಅಧೀನದಲ್ಲಿರುವ ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ. ಅಧಿಕಾರದಲ್ಲಿದ್ದಾರೆ.  ಶಾಸಕರ ಬೆಂಬಲ ಮಠಕ್ಕೆ ಆನೆ ಬಲ ಎಂದು ಮಾತನಾಡಿದ್ದರು. ನಂತರ ಅವರ ಸಹೋದರ ಕೆ.ಸಿ.ನಾಗರಾಜ್ ಕೂಡಾ ಶರಣ ಸಂಸ್ಕೃತಿ ಉತ್ಸವದ ಕಾರ್ಯಾಧ್ಯಕ್ಷರಾಗಿದ್ದಾರೆ. ಮುರುಘಾ ಶರಣರು ಆದಷ್ಟು ಬೇಗ ಹೊರಗೆ ಬರಲಿ ಎಂದು ಬಸವಪ್ರಭು ಸ್ವಾಮೀಜಿ ಅಪಾರ  ಹೋರಾಟ ಮಾಡಿದ್ದರು. ಅನೇಕ ಸಂಕಷ್ಟಗಳನ್ನು ಎದುರಿಸಿದ್ದರು. ಇದೀಗ ಕೊಂಚ ನಿರುಮ್ಮಳತೆ ಬಂದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಜೈ ಮುರುಘೇಶನ  ಘೋಷಣೆಯೊಂದಿಗೆ ಭಕ್ತರು ಸಂಭ್ರಮ ಹಂಚಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.