ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿದ್ದ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಸಲ್ಲಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ವಿಕ್ರಾಂತ್ ರೋಣ 'ಗಡಂಗ್ ರಕ್ಕಮ್ಮ' ಟ್ಯೂನ್ ರೆಡಿಯಾಗಿದ್ದು ಹೇಗೆ ಗೊತ್ತೇ?


ರಾಜೀನಾಮೆ ಪ್ರತಿಯಲ್ಲಿ ಏನಿದೆ? 
"ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ದೇಶದಲ್ಲೆ ಸುದೀರ್ಘ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾನು ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆ ಹೊಂದಿದೆ. ಪಕ್ಷಕ್ಕೆ ಸೇರಿದಾಗಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆಂಬ ತೃಪಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ಪತ್ರದಲ್ಲಿ ತಿಳಿಸಿದ್ದಾರೆ. 


ಇದನ್ನು ಓದಿ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ನೂತನ ಅಧ್ಯಕ್ಷರಾಗಿ ಭಾ.ಮಾ ಹರೀಶ್ ಆಯ್ಕೆ


"ಇದುವರೆಗೆ ನನಗೆ ಪಕ್ಷದಲ್ಲಿ ಬೆಂಬಲಿಸಿದ, ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಮನದಾಳದ ಕೃತಜ್ಞತೆಗಳು" ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.