ಬೆಂಗಳೂರು : ಮುಖ್ಯ ಮಂತ್ರಿಯವರನ್ನು ಭೇಟಿ ಮಾಡಿ ರಾಜೀನಾಮೆ ಪ್ರಸಂಗದ ಕುರಿತು ಚರ್ಚಿಸಲಿದ್ದೇನೆ ಎಂದು ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.  ರಾಜೀನಾಮೆ ಪ್ರಸಂಗದ ಹಿಂದಿನ ರೂವಾರಿ ಯಾರು ಎಂದು ಗೊತ್ತಿಲ್ಲ. ಈ ಬೆಳವಣಿಗೆ ನನಗೆ ದಿಗ್ಭ್ರಮೆ ಉಂಟು ಮಾಡಿದೆ ಎಂದು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್‌ನ ಹೈಕಮಾಂಡ್ ನೀಡುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಕೆಲಸ ಮಾಡುತ್ತೇವೆ. ಆದರೆ ಇಲ್ಲಿ ನಡೆದಿರುವ ರಾಜೀನಾಮೆಯ ಪ್ರಹಸನ ನನಗೆ ಆಶ್ಚರ್ಯ ಉಂಟುಮಾಡಿದೆ ಎಂದು ಮುನಿಯಪ್ಪ ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಸತತವಾಗಿ ರಾಜಕೀಯ ಮಾಡಿದ್ದೇನೆ. 10 ವರ್ಷಗಳ ಕಾಲ ಪಕ್ಷ ಕೇಂದ್ರದಲ್ಲಿ ಸಚಿವನನ್ನಾಗಿಸಿದೆ ಎಂದಿದ್ದಾರೆ. 


ಇದನ್ನೂ ಓದಿ : Bengaluru-Tumkur Metro : ತುಮಕೂರು-ಬೆಂಗಳೂರು ಮೆಟ್ರೋ ಅಪ್‌ಡೇಟ್‌ : 52.41 ಕಿ.ಮೀ ನಲ್ಲಿ 19 ನಿಲ್ದಾಣಗಳು


ಕಾಂಗ್ರೆಸ್ ಪಕ್ಷವು ಕುಟುಂಬದ ಹಲವರಿಗೆ ಟಿಕೆಟ್ ನೀಡಿರುವುದುರಿಂದ ಸಹಜವಾಗಿಯೇ ನಾನೂ  ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ ಸಿಗುತ್ತದೆ ಎನ್ನುವ ಆಶಾಭಾವನೆಯಿದೆ. ನಾನು ಕೋಲಾರ ಲೋಕಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ಮುಖ್ಯಮಂತ್ರಿಗಳಿಗೆ ಹಾಗೂ ಕೆ.ಪಿ.ಸಿ.ಸಿ  ಅಧ್ಯಕ್ಷರವರಿಗೆ ನೀಡಿದ್ದೇನೆ ಎದ್ನು ಹೇಳಿದ್ದಾರೆ. 


ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ ಪಕ್ಷದ್ದಾಗಿರಬೇಕೇ ವಿನ: ವ್ಯಕ್ತಿ ಪ್ರತಿಷ್ಠೆಯಿಂದ ಕೂಡಿರಬಾರದು. ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿ ಹೈಕಮಾಂಡ್ ಸೂಚಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದೇ ನಮ್ಮ ಆದ್ಯ ಕರ್ತವ್ಯವಾಗಿದೆ ಎದ್ನು ಮುನಿಯಪ್ಪ ಹೇಳಿದ್ದಾರೆ. 


ಇದನ್ನೂ ಓದಿ : ಹಣವೋ ಜನಬಲವೋ ಈ ಚುನಾವಣೆಯಲ್ಲಿ ನಿರ್ಧಾರ ಆಗಬೇಕು


ಕಾಂಗ್ರೆಸ್ ಪಕ್ಷ ಒಂದು ಕುಟುಂಬವಿದ್ದಂತೆ ಈ ಜಗಳ ಹಾಗೂ ಮನಸ್ಥಾಪಗಳನ್ನು ನಮ್ಮ ಹಂತದಲ್ಲಿಯೇ ಬಗೆಹರಿಸಿಕೊಂಡು ಮುನ್ನಡೆಯಬೇಕಾಗಿದೆ. ಈ ರೀತಿಯಲ್ಲಿ ರಾಜೀನಾಮೆ ನೀಡುವ ಹಂತಕ್ಕೆ ಯಾವ ಕಾರಣದಿಂದ ಹೋದರು ಎಂಬುವುದು ಕುತೂಹಲಕರವಾಗಿದೆ ಎದ್ನು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.