ಬೆಂಗಳೂರು: ಕೋಲಾರದಲ್ಲಿರುವ ಬಿಇಎಂಎಲ್ (BEML) ಕಾರ್ಖಾನೆಯನ್ನು ಖಾಸಗಿಯವರಿಗೆ ಹಸ್ತಾಂತರಿಸುವುದಿಲ್ಲ. ಇದು ಕೇಂದ್ರ ಸರ್ಕಾರದ ಅಧೀನದಲ್ಲಿದ್ದು ಈ ಬಗ್ಗೆ ವದಂತಿಗಳಿಗೆ ಕಿವಿಗೊಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ಮನವಿ ಮಾಡಿದರು. 


COMMERCIAL BREAK
SCROLL TO CONTINUE READING

ಜೆಡಿಎಸ್‍ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ವಿಧಾನಪರಿಷತ್‍ನಲ್ಲಿ ಮಂಗಳವಾರ ಉತ್ತರಿಸಿದ ಸಚಿವ ನಿರಾಣಿಯವರು, ಬೆಮೆಲ್ ಕಾರ್ಖಾನೆ 16 ಸಾವಿರ ಎಕರೆ ಜಾಗದಲ್ಲಿ 12,500 ಎಕರೆ ಖಾತೆ ಆಗಿದೆ. 3500 ಎಕರೆಯನ್ನು ಕೈಗಾರಿಕಾ (Industry) ಉದ್ದೇಶಕ್ಕಾಗಿ ರಾಜ್ಯ ಸರ್ಕಾರಕ್ಕೆ ಬಿಟ್ಟು ಕೊಡಲು ನಿರ್ಧರಿಸಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಐದು ವಲಯಗಳಲ್ಲಿ ಟೌನ್‍ಶಿಪ್ ನಿರ್ಮಾಣ: ಸಚಿವ ಮುರುಗೇಶ್ ನಿರಾಣಿ


ಮತ್ತೊಮ್ಮೆ ಆ ಭಾಗದಲ್ಲಿ ಡ್ರೋನ್ ಸರ್ವೆ (Drone Survey) ನಡೆಸಲಾಗಿದ್ದು, ಎರಡು ದಿನಗಳಲ್ಲಿ ಕೇಂದ್ರ ಸಚಿವರಿಗೆ ವರದಿಯನ್ನು ಸಲ್ಲಿಸಲಾಗುತ್ತದೆ. ಇದೇ ಮಾರ್ಚ್‌ 10 ರಂದು ದೆಹಲಿಗೆ ತೆರಳಿ ಗಣಿ ಸಚಿವರ ಜತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಬಿಇಎಂಎಲ್‍ನಲ್ಲಿ 1149 ಎಕರೆ ಭೂಮಿ ಇದೆ. ಈ ಮೊದಲು  ಕೈಗಾರಿಕಾ ಪ್ರದೇಶ (Industrial Area) ಅಭಿವೃದ್ಧಿ ಪ್ರಕಾರ 979 ಎಕರೆಯನ್ನು ಬೆಮೆಲ್‍ಗೆ ನೀಡಿದ್ದು, ಅದು ಬಳಕೆಯಾಗದೆ ತಟಸ್ಥವಾಗಿರುವುದರಿಂದ ಹಿಂಪಡೆದು ಅಲ್ಲಿ ಖಾಸಗಿ ಕೈಗಾರಿಕೆಗಳ ಸ್ಥಾಪೆನೆಗೆ ಅವಕಾಶ ಮಾಡಿಕೊಡಲಾಗುವುದು. ಕೈಗಾರಿಕಾ ನಿವೇಶನಗಳ ಹಂಚಿಕೆಯಲ್ಲಿ ಎಸ್ಸಿ-ಎಸ್ಟಿಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.


ಇದನ್ನೂ ಓದಿ: ಅಧಿಕಾರದುದ್ದಕ್ಕೂ ನಿದ್ದೆ ಮಾಡ್ತಾ ರಾಜ್ಯವನ್ನೇ ಸಾಲದ ಶೂಲಕ್ಕೇರಿಸಿದ ‘ಸಾಲರಾಮಯ್ಯ’: ಬಿಜೆಪಿ ಟೀಕೆ


ಕಾರ್ಖಾನೆಯಲ್ಲಿರುವ  ಹೆಚ್ಚುವರಿ ಭೂಮಿಯನ್ನು ಹಿಂಪಡೆಯಲಾಗುತ್ತದೆ. ಕೇಂದ್ರ ಸರ್ಕಾರದ ಸಂಸದೀಯ ಆರ್ಥಿಕ ಸಮಿತಿ 2016ರಲ್ಲಿ ನಿರ್ಣಯ ತೆಗೆದುಕೊಂಡು ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಂದ ಬಂಡವಾಳ ಹಿಂತೆಗೆತಕ್ಕೆ ತೀರ್ಮಾನಿಸಿದೆ. ಹೀಗಾಗಿ ಹಂತ ಹಂತವಾಗಿ ಸರ್ಕಾರಿ ಬಂಡವಾಳವನ್ನು ವಾಪಸ್ ತೆಗೆಯಲಾಗುವುದು. ಬೆಮೆಲ್‍ನಲ್ಲಿ ಪ್ರಸ್ತುತ ಶೇ.47ರಷ್ಟು ಬಂಡವಾಳ ಇದೆ. ಅದನ್ನು ಸದ್ಯಕ್ಕೆ ಮುಂದುವರಿಸಲಾಗುತ್ತದೆ ಎಂದರು.


ಕೇಂದ್ರದ ಆರ್ಥಿಕ ವ್ಯವಹಾರಗಳ  ಇಲಾಖೆ ಕಾರ್ಖಾನೆಯನ್ನು ಮುಚ್ಚದೆ ಮುಂದುವರಿಸಿಕೊಂಡು ಹೋಗಲು ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವುದರಿಂದ ಕೇಂದ್ರ ತೆಗೆದುಕೊಳ್ಳುವ ನಿಯಮಗಳಿಗೆ ಬದ್ಧರಾಗಬೇಕಾಗುತ್ತದೆ ಎಂದು ಅವರು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.