ಸುರಪುರ : BJPಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ.ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು  ಭರ್ಜರಿ ಬಹುಮತದಿಂದ ಗೆಲ್ಲಿಸಿ ಎಂದು ಸಿ.ಎಂ ಸಿದ್ದರಾಮಯ್ಯ ಕರೆ ನೀಡಿದರು. 


COMMERCIAL BREAK
SCROLL TO CONTINUE READING

ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು ನೀಡುವಂತೆ ಕರೆ ನೀಡಿದರು. ಸುರಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ. ಇದು ಅಪ್ಪಟ ಸುಳ್ಳು.ಮೋದಿಯಿಂದ ಹಿಡಿದು ಅಮಿತ್ ಶಾ ಮತ್ತು ರಾಜೂಗೌಡನವರೆಗೂ ಸುಳ್ಳುಗಳ ಸರದಾರರು. ಮನುಷ್ಯರು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದ ಸುಳ್ಳುಗಳನ್ನು ಇವರು ನೀರು ಕುಡಿದಷ್ಟೆ ಸಲೀಸಾಗಿ ಹೇಳುತ್ತಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.


ಇದನ್ನೂ ಓದಿ : ಹಾಲಿನ ಪ್ರೋತಾಹಧನ ನೀಡದ ಕಾಂಗ್ರೆಸ್‌ ಸರ್ಕಾರ, ಖಜಾನೆ ಖಾಲಿಗೆ ಇದೇ ಸಾಕ್ಷಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ


ಮೊದಲ ಮತ್ತು ಎರಡನೆ ಹಂತದ ಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತದೆ ಎನ್ನುವುದು ಮೋದಿಗೆ ಸ್ಪಷ್ಟವಾಗಿ ಗೊತ್ತಾಗಿದೆ.ಬಿಜೆಪಿಯವರೇ ಮಾಡಿಸಿರುವ ಸಮೀಕ್ಷೆಯಲ್ಲೇ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದೇ ಬಂದಿದೆ. ರಾಷ್ಟ್ರ ಮಟ್ಟದಲ್ಲಿ ಬಿಜೆಪಿ 200 ಸೀಟು ಗೆದ್ದರೆ ಹೆಚ್ಚು ಎನ್ನುವಂತಹ ಸ್ಥಿತಿ ಇದೆ. ಹೀಗಾಗಿ ಸೋಲಿಗೆ ಹೆದರಿ ಮೋದಿ, ಶಾ, ರಾಜುಗೌಡ ಭರ್ಜರಿ ಸುಳ್ಳುಗಳನ್ನು ಹೇಳುತ್ತಿದ್ದಾರೆ.ಈ ಸುಳ್ಳುಗಳಿಗೆ ಮರುಳಾಗಬೇಡಿ ಎಂದರು. 


AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ , ದಿವಂಗತ ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಪತ್ನಿ ಮತ್ತು ಪುತ್ರರು ಸೇರಿ ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದರು.


ಇದನ್ನೂ ಓದಿ ಪೆನ್ ಡ್ರೈವ್ ಪ್ರಕರಣದಿಂದ ನುಣುಚಿಕೊಳ್ಳಲು ಶಿವಕುಮಾರ್ ವಿರುದ್ಧ ಅನಗತ್ಯ ಆರೋಪ ಮಾಡ್ತಿದ್ದಾರೆ: ಡಿ.ಕೆ. ಸುರೇಶ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.