ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಬ್ಯಾತಹಳ್ಳಿ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮೇಲಂತಸ್ಥಿನ ಸಭಾಂಗಣವನ್ನು ಉದ್ಘಾಟಿಸಿ ಮಾತನಾಡಿದರು.


ನಾನು ಅಧಿಕಾರದಲ್ಲಿರುವವರೆಗೂ ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕ ಯೋಜನೆಯನ್ನು ಹಾಗೂ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯನ್ನು ಮಾಡುವುದೇ ನನ್ನ ಗುರಿ. ನನ್ನನ್ನು ನಂಬಿರುವ ಜನತೆಯನ್ನು ನಾನು ಎಂದಿಗೂ ಕೈ ಬಿಡುವುದಿಲ್ಲ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ,  ನಂಜನಗೂಡು-ಮೈಸೂರು ರಸ್ತೆಯಿಂದ ಗೆಜ್ಜಗಳ್ಳಿ ಮಂಡಕಳ್ಳಿ ಮಾರ್ಗವಾಗಿ ಹೊರವರ್ತುಲ ರಸ್ತೆ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2 ಕೋಟಿ ರೂ. ವೆಚ್ಚದಲ್ಲಿ, ಎಂ.ಎಂ ರಸ್ತೆಯಿಂದ ದಡದಹಳ್ಳಿ, ಬ್ಯಾತಹಳ್ಳಿ ಮಾರ್ಗ ದೊಡ್ಡಕ್ಯಾನ ಸೇರುವ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂ. ವೆಚ್ಚದಲ್ಲಿ, ಕಡಕೊಳ-ಜಯಪುರ ರಸ್ತೆಯ ಅಭಿವೃದ್ಧಿಗೆ 60 ಲಕ್ಷ ರೂ. ವೆಚ್ಚದಲ್ಲಿ, ಉದ್ಬೂರು, ದೂರ-ಹುಲ್ಲಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 1.20 ಕೋಟಿ ರೂ. ವೆಚ್ಚದಲ್ಲಿ, ಮಂಡಕಳ್ಳಿ ವಿಮಾನ ನಿಲ್ದಾಣ ಹಿಂಭಾಗವಿರುವ ಪೌರ ಕಾರ್ಮಿಕರ ಕಾಲೋನಿಗೆ ಸೇರುವ ರಸ್ತೆ ಅಭಿವೃದ್ಧಿಗೆ 65 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.