ಬೆಂಗಳೂರು: ಕೆಪಿಸಿಸಿ ನೂತನ ಸಾರಥಿಯಾಗಿ ಆಯ್ಕೆಯಾಗಿರುವ ದಿನೇಶ್ ಗುಂಡೂರಾವ್, ರಾಹುಲ್ ಗಾಂಧಿಯವರು‌ KPCC ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿದ್ದಾರೆ. ಅದಕ್ಕಾಗಿ ಅವರಿಗೆ ಹಾಗೂ ರಾಜ್ಯ ಕಾಂಗ್ರೆಸಿನ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.


COMMERCIAL BREAK
SCROLL TO CONTINUE READING

ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ದಿನೇಶ್, ನನಗೆ ಕೆಪಿಸಿಸಿ ಅಧ್ಯಕ್ಷಪಟ್ಟದ ನಿರ್ವಹಣೆ ಕಷ್ಟವೇನಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಬಲಗೊಳಿಸುವುದೇ ನನ್ನ ಗುರಿ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಕಾಂಗ್ರೆಸ್ ಪಕ್ಷ ಮತ್ತು ಜೆಡಿಎಸ್ ಪಕ್ಷಗಳ ಜೊತೆ ಸಮನ್ವಯ ಅಗತ್ಯ. ಕಾರ್ಯ ಯೋಜನೆಗಳ ಬಗ್ಗೆ  ಹಿರಿಯ ನಾಯಕರು ಮತ್ತು ಹೈಕಮಾಂಡ್ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.


2019 ರ ಲೊಕಸಭೆ ಚುನಾವಣೆಯ ಸಮಯದಲ್ಲಿ ಪ್ರಮುಖ ಜವಾಬ್ದಾರಿ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರನ್ನು ಹಾರಿಸಿ ಕಳುಹಿಸಬೇಕಿದೆ. ಆಡಳಿತ ನಡೆಸುವುದು ಮುಖ್ಯವಲ್ಲ, ಜನರಿಗೆ ಅನುಕೂಲವಾಗುವ ರೀತಿ ಅಭಿವೃದ್ಧಿ ಕೆಲಸ ಮಾಡುವುದು ಮುಖ್ಯ ಎಂದಿದ್ದಾರೆ.