ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಶೇಕಡಾ ನೂರಕ್ಕೆ ನೂರು ನಾನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ನಾನು ಸ್ಪರ್ಧಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಮುಂದಿನ ಚುನಾವಣೆಯ ಬಗ್ಗೆ ಕಾಂಗ್ರೇಸ್ ಸಿದ್ಧತೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮಾರ್ಚ್ ಮೊದಲ ವಾರದಿಂದ ಕಾಂಗ್ರೆಸ್ ನಾಯಕರೆಲ್ಲ ಒಟ್ಟಾಗಿ ಸಭೆ ನಡೆಸುತ್ತೇವೆ. ಸದ್ಯಕ್ಕೆ ಮನೆ-ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸದ್ಯಕ್ಕೆ ಸರ್ಕಾರದ ಸೌಲಭ್ಯಗಳನ್ನು ಸಾರ್ವಜನಿಕರಿಗೆ ವಿತರಿಸಲು ತಾಲ್ಲೂಕುಗಳಿಗೆ ಭೇಟಿ ನೀಡುವ‌ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.


ಒಂದು ಕುಟುಂಬಕ್ಕೆ ಒಂದೇ ಟಿಕೇಟ್ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ, ಅದು ಅವರ ವ್ಯಯಕ್ತಿಕ ಅಭಿಪ್ರಾಯ, ಅಧ್ಯಕ್ಷರ ಹೇಳಿಕೆಗೆ ನನ್ನ ಸಹಮತವಿದೆ.  ಈ ಬಗ್ಗೆ ಹೈಕಮಾಂಡ್ ಅಂತಿಮ ತಿರ್ಮಾನ ಕೈಗೊಳ್ಳಲಿದೆ. ಎಲ್ಲಕ್ಕಿಂತ ಮೊದಲು ಗೆಲ್ಲುವ ಮಾನದಂಡ ಮುಖ್ಯ ಎಂದು ತಿಳಿಸಿದರು. 


ಮುಂದುವರೆದು ಮಾತನಾಡಿದ ಅವರು ಗುಜರಾತ್ ಚುನಾವಣೆ ಕಾಂಗ್ರೆಸ್ ಪಕ್ಷದ ಬಗ್ಗೆ ಅಲ್ಲಿನ ಜನತೆಗೆ ಹೆಚ್ಚು ವಿಶ್ವಾಸವಿದೆ. ನಮ್ಮ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ನಾವು ಮನುಷ್ಯ ಧರ್ಮದಲ್ಲಿ ನಂಬಿಕೆ ಇರುವವರು. ಬಿಜೆಪಿಗೆ ಕೋಮುವಾದಿ ಮೇಲೆ ನಂಬಿಕೆ ಇದೆ. ಯಡಿಯೂರಪ್ಪ ರಾಜ್ಯ ಕಂಡ ಅತಿ ಭ್ರಷ್ಟ ಮುಖ್ಯಮಂತ್ರಿ, ಚೆಕ್ ಮೂಲಕ ಲಂಚ ತೆಗೆದುಕೊಂಡು, ಲಂಚವನ್ನು ಸಮರ್ಥಿಸಿಕೊಳ್ಳುತ್ತಿರುವ ಮನುಷ್ಯ ಎಂದು ಬಿಜೆಪಿ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದಾರೆ.