ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ

ಬೆಂಗಳೂರು: ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡುಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ‌ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.

Written by - Prashobh Devanahalli | Last Updated : May 29, 2024, 03:10 PM IST
    • ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ
    • ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    • ಪ್ರಜ್ವಲ್ ರೇವಣ್ಣ ವಾಪಸ್ ಆಗುತ್ತಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ
ನನ್ನ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಕಿಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ title=
Home Minister Dr. G Parameshwar

ಬೆಂಗಳೂರು- ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ.‌ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅಂತಹವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡುಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ‌ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.

ಇದನ್ನೂ ಓದಿ: ಕೆನಡಾದ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ: ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್

ಪ್ರಜ್ವಲ್ ರೇವಣ್ಣ ವಾಪಸ್ ಆಗುತ್ತಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪ್ರಜ್ವಲ್ ವಿರುದ್ಧ ವಾರಂಟ್ ಜಾರಿಯಾಗಿರುವುದರಿಂದ ಬಂಧಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎಸ್ಐಟಿಯವರು ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದರು.

ಎಂಎಲ್‌ಸಿ ಅಭ್ಯರ್ಥಿಗಳ ಆಯ್ಕೆ ವಿಚಾರದ ಕುರಿತು ಮಾತನಾಡಿ, ನನ್ನ ಹೇಳಿಕೆಯನ್ನು ಯಾರು ತಪ್ಪಾಗಿ ಅರ್ಥೈಸಿಕೊಳ್ಳಬೇಕಾದ ಅಗತ್ಯ ಇಲ್ಲ. ಪ್ರಮುಖರೊಂದಿಗೆ ಸಮಾಲೋಚನೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕಾದುದು ಪ್ರಕ್ರಿಯೆ. ಯಾರು ಸಹ ಇದನ್ನು ತಪ್ಪು ಅಂತ ಹೇಳಲಾಗುವುದಿಲ್ಲ. ನಾನು ಸಹ ಕೆಪಿಸಿಸಿ‌ ಅಧ್ಯಕ್ಷನಾಗಿ‌ ಕೆಲಸ ಮಾಡಿದ ಅನುಭವದಿಂದ ಆ‌ ಮಾತನ್ನು ಹೇಳಿದ್ದೇನೆ. ನಾವು ಹೇಳಿದವರಿಗೆ ಅವಕಾಶ ನೀಡಬೇಕು ಅಂತ ಹೇಳಲು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಯಾರು ಪಕ್ಷಕ್ಕಾಗಿ ದುಡಿದಿದ್ದಾರೋ, ಯಾವ ಸಮುದಾಯ ಪಕ್ಷದ ಜೊತೆ ನಿಂತಿದೆಯೋ ಅಂತವರಿಗೆ ಅವಕಾಶ‌ ಕಲ್ಪಿಸಬೇಕು. ಪಕ್ಷಕ್ಕಾಗಿ‌ ಕೆಲಸ‌ ಮಾಡಿದ ಅನೇಕರಿಗೆ ಅನುಭವ ಇರುತ್ತದೆ. ಅಂತವರೊಂದಿಗೆ ಸಮಾಲೋಚಿಸಿ ಅಭಿಪ್ರಾಯ ಪಡೆಯಬೇಕು ಎಂಬುದನ್ನು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು‌.

ನನ್ನ ಅಭಿಪ್ರಾಯವನ್ನು ನಾನು ಹೇಳಿಬಿಟ್ಟಿದ್ದೇನೆ.‌ ಏಳು ಸ್ಥಾನಗಳು ನಮ್ಮ ಪಕ್ಷಕ್ಕೆ ಬರುತ್ತವೆ. 300 ಅರ್ಜಿ ಬಂದಿವೆ ಎಂಬುದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಆಯ್ಕೆ ಮಾಡುವುದು ಕಷ್ಟದ ಕೆಲಸ. ಹೈಪವರ್ ಕಮಿಟಿ ರಚಿಸಿ, ಸಮಿತಿ ಜೊತೆ ಚರ್ಚಿಸಿದರೆ ಸಲಹೆಗಳು ಬರುತ್ತವೆ. ಹೈಪವರ್ ಕಮಿಟಿ ರಚಿಸುವ ಸಮಯ ಮೀರಿದೆ ಎಂದು ಹೇಳಿದರು.

ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿಯವರನ್ನು ಭೇಟಿ‌ ಮಾಡಿಲ್ಲ. ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಕೆಲಸಗಳಿವೆ. ಯಾವುದಾದರು ತೀರ್ಮಾನ ತೆಗೆದುಕೊಳ್ಳುವಾಗ ಮುಖ್ಯಮಂತ್ರಿಯವರ ಗಮನಕ್ಕೆ ತರಬೇಕಾಗುತ್ತದೆ. ಅವರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು‌

ಬೆಳ್ಳೂರು ಕ್ರಾಸ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ವಹಿಸಿದ ನಿಗದಿತವಾದ ಜವಾಬ್ದಾರಿಯನ್ನು ಅಧಿಕಾರಿಗಳು ಮಾಡದೇ ಇದ್ದಾಗ, ಅದರಿಂದ ಬೇರೆಬೇರೆ ರೀತಿಯ ತೊಂದರೆಗಳಾದ ಅಮಾನತುಗೊಳಿಸಲಾಗುತ್ತದೆ. ಇಲಾಖಾ ವಿಚಾರಣೆ ನಡೆಯುತ್ತದೆ. ದೊಡ್ಡ ಪ್ರಕರಣಗಳಲ್ಲಿ ಸಿಐಡಿಯವರು ತನಿಖೆ ಮಾಡುತ್ತಾರೆ. ತನಿಖೆಯ ವರದಿಯಲ್ಲಿ ತಪ್ಪು ಕಂಡು ಬಂದಿಲ್ಲ ಎಂದಾದರೆ ಅಮಾನತು ಆದೇಶ ಪಡೆಯಲಾಗುತ್ತದೆ. ಇದು ಇಲಾಖೆಯಲ್ಲಿ ನಡೆಯುವ ಪ್ರಕ್ರಿಯೆ ಎಂದರು.

ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ‌ ಪ್ರಕರಣದ ಕುರಿತು ಮಾತನಾಡಿ, ಸಿಐಡಿಯವರು ಪ್ರಕರಣವನ್ನು ತೆಗದುಕೊಂಡು ತನಿಖೆ ನಡೆಸುತ್ತಿದೆ. ಬೇರೆಬೇರೆ ಐಟಿ ಕಂಪನಿಗಳಿಗೆ ವರ್ಗಾವಣೆಯಾಗಿರುವ ಆರೋಪ ತನಿಖೆಯಿಂದ ಹೊರಬರುತ್ತದೆ ಎಂದರು.

ಇದನ್ನೂ ಓದಿ: ಈತ ಟೀಂ ಇಂಡಿಯಾ ಕೋಚ್ ಆದ್ರೆ ವಿರಾಟ್ ವೃತ್ತಿಜೀವನ ಅಂತ್ಯ! ಗಂಗೂಲಿ ಪರಿಸ್ಥಿತಿ ಕೊಹ್ಲಿಗೂ ಎದುರಾಗುವ ಸಾಧ್ಯತೆ

ಒಂದೊಂದು ಘಟನೆಯಾದಗೂ ವಿಪಕ್ಷದವರು ರಾಜೀನಾಮೆ‌ ಕೇಳುತ್ತಾರೆ. ಹಣ ವರ್ಗಾವಣೆಗೆ ಮೌಖಿಕವಾಗಿ ಆದೇಶ ಕೊಟ್ಟಿದ್ದಾರೆ ಎಂಬ ಆರೋಪ ತನಿಖೆಯಲ್ಲಿ ಸಾಬೀತಾದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಈಶ್ವರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಅವರ ಹೆಸರನ್ನು ನೇರವಾಗಿ ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಸಚಿವರ ಹೆಸರನ್ನು ಎಲ್ಲಿಯೂ ನೇರವಾಗಿ ಹೇಳಿಲ್ಲ. ತನಿಖೆ ಆಗುವವರೆಗೂ ಕಾಯಬೇಕು ಎಂದು ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News