ಬೆಂಗಳೂರು: ಡಿಕೆಶಿ ಜೆಡಿಎಸ್ ಬಾವುಟ ಹಿಡಿದಿರುವ ವಿಚಾರವಾಗಿ ಮಾತನಾಡಿದ್ದ ವಿಡಿಯೋವನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಮರ್ಥಿಸಿಕೊಂಡು ಸರಣಿ ಟ್ವೀಟ್ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ತಮ್ಮ ಟ್ವೀಟ್ ಗಳ ಮೂಲಕ ಜೆಡಿಎಸ್ ಮತ್ತು ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿರುವ ಸಿದ್ಧರಾಮಯ್ಯ ತಮ್ಮದು ಜಾತಿ ವಿನಾಶ ಹಾದಿ, ನಿಮ್ಮದು ಯಾವ ಹಾದಿ? ಎಂದು ಪ್ರಶ್ನಿಸಿದ್ದಾರೆ.


ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು 
ಬಿಜೆಪಿ ನಾಯಕರು ಪ್ರಚಾರ ಮಾಡುತ್ತಾ  ವಿಕೃತಾನಂದ ಪಡುತ್ತಿದ್ದಾರೆ.
ಇದು ನನಗೆ ಹೊಸತಲ್ಲ.
ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ.
ನನ್ನ ರಾಜಕೀಯ  ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ.



ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು ಅಂಬೇಡ್ಕರ್,ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ.
ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು.
ಇದು ನನ್ನ ಜಾತಿವಿನಾಶದ ಹಾದಿ.
ನಿಮ್ಮದು ಯಾವ ಹಾದಿ? 



ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗ ಪಡಿಸಲಿ.
ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ದ.
ಇದು ನನ್ನ ಸವಾಲು ಕೂಡಾ ಹೌದು. 



ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ, ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ? 



ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
 ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು.