ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ: ಸಿಎಂ ಸಿದ್ದರಾಮಯ್ಯ

CM Siddaramaiah: ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ವಾಲ್ಮೀಕಿ ನಿಗಮದ ಹೊರತುಪಡಿಸಿ ವಿಪಕ್ಷಗಳು ಚಕಾರ ಎತ್ತಿಲ್ಲ.. ಪ್ರವಾಹ, ಅತಿವೃಷ್ಠಿ, ಹಾನಿ ಸೇರಿದಂತೆ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು.

Written by - Yashaswini V | Last Updated : Jul 26, 2024, 11:55 AM IST
  • ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು
  • ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ ಸಂಕಷ್ಟಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ
  • ಅಧಿವೇಶನದಲ್ಲಿ ವಿರೋಧ ಪಕ್ಷಗಳ ಹೊಣೆಗೇಡಿತನವನ್ನು ಪತದರಿಕಾಗೋಷ್ಠಿಯಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ....
ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ: ಸಿಎಂ ಸಿದ್ದರಾಮಯ್ಯ   title=

Bengaluru: ನಗರದಲ್ಲಿಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ನನ್ನ ರಾಜಕೀಯ ಜೀವನ ತೆರೆದ ಪುಸ್ತಕದಂತಿದ್ದು, ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಹೇಳಿದರು. 

ಸಿಎಂ‌ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನ: 
ಈ ಸಂದರ್ಭದಲ್ಲಿ ವಿರೋಧ ಪಕ್ಷಗಳ ಮೇಲೆ ಹರಿಹಾಯ್ದ ಸಿಎಂ ಸಿದ್ದರಾಮಯ್ಯ, ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡ್ತಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು. 

ಇದನ್ನೂ ಓದಿ- ಮೂಡಾ ಅವ್ಯವಹಾರದ ತನಿಖೆಗೆ ಆಗ್ರಹಿಸಿ ವಿಪಕ್ಷಗಳ ಅಹೋರಾತ್ರಿ ಧರಣಿ ! ವಿಧಾನ ಸಭೆಯಲ್ಲಿಯೇ ನಿದ್ದೆಗೆ ಜಾರಿದ ನಾಯಕರು

ಎರಡು ವಾರಗಳು ಒಂದೇ ವಿಚಾರ ಪ್ರಸ್ತಾಪವಾಯ್ತು: 
ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. ವಾಲ್ಮೀಕಿ ನಿಗಮದ ಹೊರತುಪಡಿಸಿ ವಿಪಕ್ಷಗಳು ಚಕಾರ ಎತ್ತಿಲ್ಲ.. ಪ್ರವಾಹ, ಅತಿವೃಷ್ಠಿ, ಹಾನಿ ಸೇರಿದಂತೆ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಇದನ್ನೂ ಓದಿ- ಬಿಜೆಪಿ ಶಾಸಕರು, ಮೇಲ್ಮನೆ ಸದಸ್ಯರಿಂದ ಅಹೋರಾತ್ರಿ ಧರಣಿ : ಬಿ.ವೈ.ವಿಜಯೇಂದ್ರ

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: 
ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ.‌  ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ+ಜೆಡಿಎಸ್ ಲೋಕಸಭಾ ಚುನಾವಣೆಯಲ್ಲೂ ಹಿಂದಿನ ಬಾರಿಗಿಂತ ಹೆಚ್ಚು ಸೀಟು, ಮತ ಗಳಿಸಲು ಸಾದ್ಯವಾಗಲಿಲ್ಲ. ನಮಗೆ ಕಳೆದ ಲೋಕಸಭಾ ಚುನಾವಣೆಗಿಂತ ಶೇ13 ರಷ್ಟು ಮತಗಳನ್ನು ಈ ಚುನಾವಣೆಯಲ್ಲಿ ಹೆಚ್ಚು ಗಳಿಸಿದೆವು. ಇದರಿಂದ ಹತಾಶರಾಗಿ ಮತ್ತೆ ಜನರ ವಿಶ್ವಾಸ ಗಳಿಸಲು ತಪ್ಪು ದಾರಿಯಲ್ಲಿ ವಾಮ ಮಾರ್ಗ ಹಿಡಿದಿದ್ದಾರೆ ಎಂದು ವಿರೋಧ ಪಕ್ಷಗಳ ನಡೆ ವಿರುದ್ಧ ಸಿಎಂ ಅಸಮಾಧಾನ ಹೊರಹಾಕಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News