ಶಿಕ್ಷಣಕ್ಕೆ ನನ್ನ ಆದ್ಯತೆ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಶೀಘ್ರದಲ್ಲೇ ಸಮವಸ್ತ್ರ ವಿತರಣೆ ಕುರಿತು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ- ಹೆಚ್.ಡಿ.ಕುಮಾರಸ್ವಾಮಿ

Last Updated : Nov 28, 2018, 04:25 PM IST
ಶಿಕ್ಷಣಕ್ಕೆ ನನ್ನ ಆದ್ಯತೆ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ title=
File Image

ಮೈಸೂರು: ಮೊದಲಿನಿಂದಲೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಇಂದು ಮೈಸೂರು ವಿಶ್ವವಿದ್ಯಾಲಯದಲ್ಲಿ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆ ಸಂವಾದ ನಡೆಸುತ್ತೇವೆ. ಅವರಿಂದ  ಮೌಲ್ಯಾಧಾರಿತ ಸಲಹೆ ಸೂಚನೆಗಳನ್ನು ಪಡೆದು ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. 

ಬುಧವಾರ ಮೈಸೂರಿನ ಲಲಿತ್ ಮಹಲ್ ಹೆಲಿಪ್ಯಾಡ್ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಸಮವಸ್ತ್ರ ನೀಡಲು ಕೇಂದ್ರ ಸರ್ಕಾರದಿಂದ ಹಣ ಬರುವುದು ವಿಳಂಬವಾಗಿದೆ. ಹಾಗಾಗಿ ಸಮವಸ್ತ್ರ ವಿತರಣೆ ವಿಳಂಬವಾಗಿದೆ
ಶೀಘ್ರದಲ್ಲೇ ಈ ಕುರಿತು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು. 

ರಾಜ್ಯದ ಬರ ಪರಿಹಾರಕ್ಕೆ 16 ಸಾವಿರ ಕೋಟಿ ರೂ.ಗಳ ನೆರವನ್ನು ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.

Trending News