ಬೆಂಗಳೂರು: ನಾನು ರಾಜೀನಾಮೆ ಎಂದು ಎಲ್ಲೂ ಹೇಳಿಲ್ಲ ಅದೆಲ್ಲಾ ವಾಟ್ಸಪ್ ಯುನಿವರ್ಸಿಟಿಯಲ್ಲಿ ಬಂದಂತಹ ವಿಷಯ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
ವಿಧಾನ ಪರಿಷತ್ ಹಿರಿಯ ಸದಸ್ಯರಾದ ಬಿ ಕೆ ಹರಿಪ್ರಸಾದ್ ಅವರ ಪತ್ರಿಕಾ ಗೋಷ್ಠಿಯ ಮುಖ್ಯಾಂಶಗಳು
ಮೇಲ್ಮನೆ ವಿಪಕ್ಷ ನಾಯಕರನ್ನು, ಸಭಾನಾಯಕರನ್ನ ಮಾಡೊದು ಸಂಪ್ರದಾಯ, ಪದ್ದತಿ ಹಿಂದಿನಿಂದಿಲೂ ಇತ್ತು.ಆ ಸಂಪ್ರದಾಯ ಮುರಿದಿದ್ದಾರೆ. ಸಚಿವ ಸ್ಥಾನ ಅದು ಮುಖ್ಯಮಂತ್ರಿಗಳ ಪರಮಾಧಿಕಾರ.ನಾನೆಂದೂ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ. ಪರಿಷತ್ ನಲ್ಲಿ ಸಭಾನಾಯಕರನ್ನಾಗಿ ಯಾರನ್ನ ಮಾಡಬೇಕೆಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರನ್ನೇ ಕೇಳಿ.
ರಾಜೀನಾಮೆ ಕೊಡ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ. ಅದೆಲ್ಲ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಬಂದಂತಹ ವಿಷಯ. ನನ್ನ ಪರಮೋಚ್ಛ ನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರು ನನ್ನ ಮೇಲೆ ಜವಾಬ್ದಾರಿ ಕೊಟ್ಟು ಪರಿಷತ್ ಸದಸ್ಯತ್ವ ಸ್ಥಾನ ನೀಡಿದ್ದಾರೆ. ಅದನ್ನ ನಿಭಾಯಿಸುತ್ತಿದ್ದೇನೆ. ರಾಜೀನಾಮೆ ನೀಡುವುದಾದರೆ ಶ್ರೀಮತಿ ಸೋನಿಯಾಗಾಂಧಿ ಹಾಗೂ ಸಭಾಪತಿಯವರಿಗೆ ನೀಡುತ್ತೇನೆ. ಸಚಿವ ಸ್ಥಾನ ಇಲ್ಲದಿದ್ದರೂ ನಾನು ಪರಿಷತ್ ನಲ್ಲಿ ಸಾಮಾನ್ಯ ಸದಸ್ಯನಾಗಿರುತ್ತೇನೆ.
ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲು ಕೇವಲ ಒಂದು ಹೆಜ್ಜೆ ಮಾತ್ರ ಇದೆ. ಅಧಿಕಾರ ಹಂಚಿಕೆ ಕೇವಲ ಏಳು ಜನರಿಗೆ ಮಾತ್ರ ಗೊತ್ತಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಖರ್ಗೆ, ಶ್ರೀಮತಿ ಸೋನಿಯಾ ಗಾಂಧಿ, ಶ್ರೀ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಹಾಗೂ ಸುರ್ಜೇವಾಲಾ ಅವರಿಗೆ ಮಾತ್ರ ಗೊತ್ತಿದೆ. ಉಳಿದವರು ಯಾರೇ ಮಾತಾಡಿದರೂ ಕೇವಲ ಒಬ್ಬರನ್ನ ಓಲೈಸಿಕೊಳ್ಳಲು ಮಾತ್ರ. ಯಾರೇ ಅಧಿಕಾರ ಹಂಚಿಕೆ ಬಗ್ಗೆ ಮಾತಾಡಿದರೂ ಅದು ಸುಳ್ಳು.
ನನ್ನ ಸಾಮಾಜಿಕ ನ್ಯಾಯದ ಸಿದ್ದಾಂತಕ್ಕೂ, ಅಹಿಂದ ರಾಜಕೀಯಕ್ಕೂ ವ್ಯತ್ಯಾಸ ಇದೆ. ನಾನು ಸರ್ವಧರ್ಮ ಸಮ ಬಾಳ್ವೆಯಲ್ಲಿ ನಂಬಿಕೆ ಇಟ್ಟವನು. ಕಾಂಗ್ರೆಸ್ ಸಿದ್ದಾಂತದಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಿಯವರೆಗೂ ಇರು ಅಂತಾರೊ, ಅಲ್ಲಿಯವರೆಗೂ ನಾನು ಇರ್ತಿನಿ. ಕಾಲ ಬಂದಾಗ ಎಲ್ಲವನ್ನೂ ಹೇಳುತ್ತೇನೆ. ಯಾವ ಸಂಕೋಚವೂ ಇಲ್ಲ, ತಾಪತ್ರಯವೂ ಇಲ್ಲ. ಪಕ್ಷದಲ್ಲಿ ಎಲ್ಲರೂ ಅವರವರ ರೀತಿಯಲ್ಲಿ ಪಕ್ಷಕ್ಕಾಗಿ ದುಡಿದಿರುತ್ತಾರೆ. ನಾನು ಪಕ್ಷ ಕಟ್ಟಿದವನು. ರಾಜೀನಾಮೆರಾಜೀನಾಮೆ ವಿಷಯ ಎಲ್ಲಿಂದ ಹುಟ್ಟಿದೆ ಗೊತ್ತಿಲ್ಲ. ರಾಜೀನಾಮೆ ಕೊಡಲು ನಾನು ಬಾಡಿಗೆ ಮನೆಯಿಂದ ಬಂದವನಲ್ಲ ಸ್ವಂತ ಮನೆಯಲ್ಲಿದ್ದೇನೆ.
ಇದನ್ನೂ ಓದಿ: ಹೊಸನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ.. ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ
ವೀರಪ್ಪ ಮೊಯಿಲಿಯವರ ಮಾತಿಗೆ ನಾನೇನು ಹೇಳೊಲ್ಲ, ಅವರ ಜ್ಞಾನಭಂಡಾರ ಇರುವಂತವರು. ಅವರ ಮಾತಿಗೆ ನಾನೇನು ಹೇಳೊಲ್ಲ,ನಾನೂ ಪಕ್ಷ ಕಟ್ಟಿದವನು. ಸ್ವಂತ ಮನೆಯಲ್ಲಿ ಇರುವವನು, ಬಾಡಿಗೆ ಮನೆ ತಗೊಂಡು ಬಂದವನು. ಈ ಮನೆ ಬಿಟ್ಟು ಹೋಗೋದಕ್ಕೆ , ಅಥವ ಧ್ವಂಸ ಮಾಡೊದಿಕ್ಕೆ.ರಾಜೀನಾಮೆ ಯೆಲ್ಲ ವಾಟ್ಸಾಪ್ ಯೂನಿವರ್ಸಿಟಿ ಸೃಷ್ಠಿ. ಪಕ್ಷದಲ್ಲಿ ಸಕ್ರಿಯ ವಾಗಿರುವವರಿಗೆ ಮಣೆ ಹಾಕುವುದು ಪದ್ದತಿ. ಸಾಂಧರ್ಬಿಕವಾಗಿ ನಾನು ಹೇಳ ಬೇಕಾದಾಗ ಹೇಳ್ತೀನಿ. ಪಕ್ಷ ನಿಷ್ಠೆ ವಿಷಯ ಹಲವಾರು ಆಯಾಮಗಳಿದೆ. ಕಾಲ ನಿರ್ಧರ ಮಾಡಲಿದೆ.
ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಲ್ಲಿ ಸಿಎಂ ಆಗ್ತಾರೆ ಎಂದು ಒಕ್ಕಲಿಗ ಸಮುದಾಯ ಕಾಂಗ್ರೆಸ್ ಕಡೆ ಬಂತು. ಜೆಡಿಎಸ್ನ ಮತಗಳೆಲ್ಲ ಕಾಂಗ್ರೆಸ್ ಕಡೆ ಬಂದಿದೆ. ಇದರಿಂದ ಜೆಡಿಎಸ್ ಮತಗಳು ಕುಸಿದಿದೆ. ಒಕ್ಕಲಿಗ ಸಮುದಾಯದ ನಾಯಕತ್ವ ನಮಗೆ ಇರಲಿಲ್ಲ, ಡಿ.ಕೆ.ಶಿವಕುಮಾರ್ ಅವರನ್ನ ಕೆಪಿಸಿಸಿ ಅಧ್ಯಕ್ಷ ಮಾಡಿದಾಗ, ಅವರು ಸಿಎಂ ಆಗ್ತಾರೆ ಎಂದಾಗ ಒಕ್ಕಲಿಗ ಓಟ್ ಕಾಂಗ್ರೆಸ್ ಗೆ ಬಂದಿದೆ. ಡಿ.ಕೆ.ಶಿವಕುಮಾರ್ ಅವರನ್ನ ಈಗ ಡಿಸಿಎಂ ಮಾಡಿದ್ದಾರೆ.
ಪಕ್ಷ ಭರವಸೆ ಕೊಟ್ಟ ಗ್ಯಾರೆಂಟಿಗಳನ್ನ ಸರ್ಕಾರ ನೂರಕ್ಕೆ ನೂರು ಮಾಡಲಿದೆ. ಯಾವ ಅನುಮಾನವೂ ಬೇಡ. ಗ್ಯಾರಂಟಿಗಳ ಬಗ್ಗೆ ಅಂಕಿಅಂಶ ಸಂಗ್ರಹಿಸುತ್ತಿದ್ದಾರೆ. ಸರ್ಕಾರದ ನೀತಿ ನಿಯಮದ ಏನು ಮಾಡಬೇಕೆಂದು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಅದು ಬಂದ ನಂತರ ಗ್ಯಾರಂಟಿ ಖಂಡಿತ ಜಾರಿಯಾಗುತ್ತೆ.ಲೋಕಸಭೆಯಾದ ನಂತರ ಸರ್ಕಾರ ಪತನವಾಗಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಹಗಲು ಕನಸನ್ನ ಕುಮಾರ ಸ್ವಾಮಿಯವರು ಕಾಣ್ತಿದಾರೆ, ಇಷ್ಟು ದಿನ ರಾತ್ರಿ ಹಗಲು ನಿದ್ದೆ ಇರ್ತಿರಲಿಲ್ಲ. ಈಗ ಹಗಲು ರಾತ್ರಿ ನಿದ್ದೆ ಮಾಡ್ತಿದ್ದಾರೆ ಹೀಗಾಗಿ ಹಗಕು ಕನಸು ಕಾಣುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ