ಬೆಂಗಳೂರು : ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ರಸ್ತೆಯಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಈಗ ಅಪಘಾತ ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ.ಹೌದು, ಈಗ ಅಪಘಾತಗಳ ಸಂಖ್ಯೆಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಅತಿ ವೇಗವಾಗಿ ವಾಹನ ಓಡಿಸುವ ಚಾಲಕರರಿಗೆ ವೇಗವನ್ನು ಸೀಮಿತಗೊಳಿಸುವುದಲ್ಲದೆ ದಂಡವನ್ನು ವಿಧಿಸಲು ಮುಂದಾಗಿದೆ.
ಇದನ್ನೂ ಓದಿ: Ajit Agarkar: ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್ ನೇಮಕ
ಬೆಂಗಳೂರು ಮೈಸೂರು ರಸ್ತೆಯಲ್ಲಿ ವೇಗವಾಗಿ ಚಲಿಸುವ ಸವಾರನ್ನು ತಡೆದು ದಂಡ ವಿಧಿಸಲಾಗುತ್ತಿದೆ.ಈ ಕುರಿತಾಗಿ ಸೂಚನೆ ನೀಡಿರುವ ಡಿಜಿಪಿ ಅಲೋಕ್ ಕುಮಾರ್ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ಸವಾರರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದರು.
ಸರಾಸರಿ 122 ಕೀಮಿ ವೇಗದಲ್ಲಿ ಸವಾರಿ ಮಾಡುತ್ತಿದ್ದ ವಾಹನಗಳಿಗೆ ಈಗ ವೇಗದ ಮೀತಿಯನ್ನು 100 ಕಿಲೋ ಮೀಟರ್ ಸೀಮಿತಗೊಳಿಸಿ ಆದೇಶ ಹೊರಡಿಸಿದ್ದಾರೆ.ವೇಗವಾಗಿ ವಾಹನ ಸವಾರಿ ಮಾಡುತ್ತಿದ್ದರಿಂದಾಗಿ ಈ ರಸ್ತೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿತ್ತು, ಈಗ ರಾಮನಗರದ ಪೊಲೀಸರು ಹೆದ್ದಾರಿಯಲ್ಲಿ ಪ್ಯಾಟ್ರೋಲಿಂಗ್ ವ್ಯವಸ್ಥೆ ಮಾಡಿ ವಾಹನ ಸವಾರರ ಮೇಲೆ ನಿಗಾವಹಿಸಿದ್ದಾರೆ.
ಇದನ್ನೂ ಓದಿ: ಇನ್ನೇಕೆ ಹೇರ್ ಡೈ..? ಈ 3 ಎಲೆಗಳ ಪೇಸ್ಟ್ ಹಚ್ಚಿದರೆ ಬಿಳಿಕೂದಲು ಬುಡದಿಂದಲೇ ಕಪ್ಪಾಗುತ್ತೆ!
ಈ ಬಗ್ಗೆ ಟ್ವೀಟ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್ ಎಕ್ಸ್ಪ್ರೆಸ್ ರಸ್ತೆಯಲ್ಲಿ ಅತಿ ಹೆಚ್ಚು ವೇಗ ಹೋಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.ರಸ್ತೆಯಲ್ಲಿ ಸಂಚಾರ ನಿಯಮ ಪಾಲಿಸಿ ಎಂದು ಅವರು ಮನವಿ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.