Jamboo Savari Timing : ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಲಿದೆ. ಇದಕ್ಕೆ ಸಕಲ ಸಿದ್ಧತೆಗಳೂ ಪೂರ್ಣಗೊಂಡಿವೆ. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ.  
 ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಲಿದ್ದಾನೆ. 


COMMERCIAL BREAK
SCROLL TO CONTINUE READING

ಬೆಳಗ್ಗೆ 8 ಗಂಟೆಗೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸಲಿದೆ. 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉತ್ತರ ಪೂಜೆ ನೆರವೇರಿಸಲಿದ್ದಾರೆ. ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಸವಾರಿ ತೊಟ್ಟಿಗೆ ಆಗಮಿಸಲಿದ್ದು, ಬಳಿಕ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ 10.45ರಿಂದ ಬೆಳಗ್ಗೆ 11ರೊಳಗೆ ಜಟ್ಟಿ ಕಾಳಗ ನಡೆಯಲಿದೆ.


ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿದವರೇ ಮುಂದಿನ ಸಿಎಂ : ದೇವರಗುಡ್ಡದ ಕಾರಣಿಕ ನುಡಿ..


11.20 ರಿಂದ 11.45ರವರೆಗೆ ಅರಮನೆ ಆವರಣದ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ಹೊರಡಲಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬನ್ನಿಪೂಜೆ ನೆರವೇರಿಸಲಿದ್ದಾರೆ. ನಂತರ ಅರಮನೆಗೆ ಆಗಮಿಸಿ ಕಂಕಣ ವಿಸರ್ಜನೆ ಮಾಡಿದ ಬಳಿಕ, ಮಧ್ಯಾಹ್ನ ಶುಭ ಮಕರ‌ ಲಗ್ನದಲ್ಲಿ 1.41ರಿಂದ 2.10ರ ನಡುವೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಾಗುತ್ತದೆ. 


ಸಂಜೆ ಕುಂಭ ಲಗ್ನದಲ್ಲಿ 4 ರಿಂದ 4.30ರ ನಡುವೆ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಅಂಬಾರಿ ಒಳಗಿನ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಾಗುತ್ತದೆ. 


ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಇತರ ಸಚಿವರು ಜಂಬೂಸವಾರಿಗೆ ಆಗಮಿಸಲಿದ್ದಾರೆ. ಸಂಜೆ 4.30ಕ್ಕೆ ಅರಮನೆಯಿಂದ ಹೊರಡುವ ಜಂಬೂ ಸವಾರಿ ಬನ್ನಿಮಂಟಪ ಮೈದಾನದವರೆಗೆ ನಡೆಯಲಿದೆ. ಜಂಬೂ ಸವಾರಿ ಸುಗಮವಾಗಿ ನಡೆಯಲು ನಗರದಾದ್ಯಂತ ಭದ್ರತೆ ಹೆಚ್ಚಿಸಲಾಗಿದ್ದು. ಮೆರವಣಿಗೆ ಮಾರ್ಗದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿದೆ. 


ಇದನ್ನೂ ಓದಿ: ದೋಷವುಳ್ಳ ಒನ್ ಪ್ಲಸ್ ಮೊಬೈಲ್ ಪೂರೈಕೆ: ಪರಿಹಾರ ನೀಡಲು ಕೋರ್ಟ್ ಆದೇಶ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.